ಬೆಂಗಳೂರು: ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು ಭಾನುವಾರದಿಂದ ಅರ್ಜಿ ಸಲ್ಲಿಸಬಹುದಾಗಿ ಎಂದು ಸರ್ಕಾರ ತಿಳಿಸಿದೆ.
ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ?: ಗೃಹಜ್ಯೋತಿ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. https://sevasindhugs.karnataka.gov.in/ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಖಾತೆ ಸಂಖ್ಯೆ (Acc Id), ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇತ್ತೀಚಿಗೆ ಗೃಹ ಜ್ಯೋತಿ ಯೋಜನೆಗೆ ಇದೇ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಇಂದಿನಿಂದ ಅರ್ಜಿ ಸಲ್ಲಿಸಲು ಕೋರಿದೆ.