CRIMENEWSದೇಶ-ವಿದೇಶ

ಸಾರಿಗೆ ಬಸ್‌-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ತಿರುವನಂತಪುರಂ: ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.

ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು.

ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಕಾರು ಸಂಪೂರ್ಣ ನಜ್ಜಗುಜ್ಜಾಗಿದ್ದು ಘಟನೆಯ ತೀವ್ರತೆಯನ್ನು ತೋರುತ್ತಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ? KKRTC ನೌಕರರ 14 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಆದೇಶ ಯಾವುದೇ ಸಮಯದಲ್ಲಾದರೂ  ಹೊರಬೀಳಬಹುದು ವಾಯವ್ಯ ಸಾರಿಗೆ ಬಸ್‌- ಬೈಕ್‌ ನಡುವೆ ಡಿಕ್ಕಿ ಹೊತ್ತಿ ಉರಿದ ಬೈಕ್‌- ಸವಾರ ಸಜೀವ ದಹನ ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು