CrimeNEWSನಮ್ಮರಾಜ್ಯರಾಜಕೀಯ

ಹತ್ಯೆಯಾದ 6 ಮಂದಿಯ ಕುಟುಂಬಕ್ಕೆ ಸಿಎಂ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ವಿತರಿಸಿದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್‌ಗಳನ್ನು ಇಂದು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಬಿಜೆಪಿ ಸರ್ಕಾರದ ಅಂದಿನ ನಡೆಯನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯ ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್