NEWSದೇಶ-ವಿದೇಶನಮ್ಮರಾಜ್ಯ

ನನ್ನ ಆರೋಗ್ಯದ ಗುಟ್ಟು ಯೋಗ ಎಂದ ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ದೇಶದ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ತಮ್ಮ ಆರೋಗ್ಯಕ್ಕೆ ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗದಿನವಾದ ಇಂದು ಟ್ವೀಟ್​ ಮಾಡಿರುವ ಎಚ್​ಡಿಡಿ ನನ್ನ ಸಹ ಭಾರತೀಯರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ನಾನು 91ನೇ ವಯಸ್ಸಿನಲ್ಲಿದ್ದೇನೆ ಮತ್ತು ನಾನಿನ್ನೂ ಆರೋಗ್ಯವಾಗಿರಲು ಯೋಗವು ಸಹಕಾರಿಯಾಗಿದೆ. ಯೋಗವನ್ನು ಮಾಡುವ ಮೂಲಕ ಪ್ರತಿಯೊಬ್ಬರೂ ಇದರ ಲಾಭ ಪಡೆದುಕೊಳ್ಳಬೇಕು ಎಂಬುವುದು ನನ್ನ ಆಶಯ ಎಂದು ಹೇಳಿದ್ದಾರೆ.

ಇಂದು ವಿಶ್ವವು 9ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮದಲ್ಲಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದು, ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಆಯೋಜಿಸಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್​ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್​ ಸಚಿವಾಲಯದ ಅಡಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...