NEWSಆರೋಗ್ಯನಮ್ಮಜಿಲ್ಲೆ

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಏರುಪೇರು ತಡರಾತ್ರಿ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9.50ಕ್ಕೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರ ಆರೋಗ್ಯವನ್ನು ವಿಚಾರಿಸಿಕೊಂಡು ಬಳಿಕ ಬೆಳಗ್ಗೆ 11.30ಕ್ಕೆ ಎಚ್ಎಎಲ್ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಆಸ್ಪತ್ರೆಗೆ ಭೇಟಿ: ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ನಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ICU ನಿಂದ ವಾರ್ಡ್​ಗೆ ಶಿಫ್ಟ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...