NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಸಂಸ್ಥೆಗಳ ಸದೃಢತೆಗೆ ಸಿಬ್ಬಂದಿಗಳ ಸಮಸ್ಯೆಗೂ ಸ್ಪಂದಿಸಿ : ಶ್ರೀನಿವಾಸ ಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕೆ ಅನುಕೂಲವಾಗುವ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾಲ್ಕೂ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಇಂದು (ಜೂನ್‌24) ಏಕ ಸದಸ್ಯ ಸಮಿತಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕೆಎಸ್‌ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ತುರ್ತು ಕ್ರಮಗಳಾದ ಹೊಸ ಬಸ್‌ಗಳ ಸೇರ್ಪಡೆ (Refurbishing ) ಬಸ್‌ಗಳ ಪುನಶ್ಚೇತನ ಕಾರ್ಯ, ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕ ಸ್ನೇಹಿ ಉಪಕ್ರಮಗಳು, ಸಿಬ್ಬಂದಿಗಳ ನೇಮಕ ಇತರ ವಿಷಯಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು. ಕೆಎಸ್ಆರ್ಟಿಸಿ ವ್ಯಾಪ್ತಿಯ ವಿಭಾಗ ಹಾಗೂ ಕಾರ್ಯಾಗಾರಗಳಲ್ಲಿ 460 ಕ್ಕೂ ಹೆಚ್ಚು Refurbishing ಬಸ್ಸುಗಳನ್ನ ನಿರ್ಮಿಸಿರುವುದಕ್ಕೆ ಪ್ರಶಂಸಿಸಿದರು. ಈ ಕಾರ್ಯವು ಎಲ್ಲ ಸಂಸ್ಥೆಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ನಡೆಯಬೇಕೆಂದು ತಿಳಿಸಿದರು.

ಇನ್ನು ಸಂಪನ್ಮೂಲ ನಗದೀಕರಣದ ಬಗ್ಗೆ, ಕೂಡಲೇ ಕ್ರಿಯಾಯೋಜನೆಯನ್ನು ತಯಾರಿಸಿ, ನಾಲ್ಕು, ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಖಾಲಿ ಜಾಗಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಂಡು ವಾಣಿಜ್ಯ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ತಯಾರಿಸಿ ಕೂಡಲೇ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಸೂಚಿಸಿದರು.‌

ಮುಖ್ಯವಾಗಿ ಸಾರಿಗೆ ಸಂಸ್ಥೆಗಳ ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು, ಪ್ರಮುಖವಾಗಿ ಆಸನಗಳ ವ್ಯವಸ್ಥೆ, ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆಗಳ ಬಗ್ಗೆ ಗಮನಹರಿಸಲು ಸೂಚಿಸಿ, ತಾವೇ ಖುದ್ದು ಬಸ್‌ ನಿಲ್ದಾಣಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದಾಗಿ ಎಚ್ಚರಿಕೆ ನೀಡಿದರು.

ಇತ್ತ ಅಧಿಕಾರಿಗಳು ಕಚೇರಿಯಲ್ಲೇ ಕುಳಿತುಕೊಂಡು ಎಲ್ಲವನ್ನು ಗಮನಿಸಿದ್ದೇವೆ ಎಂದು ಹೇಳದೆ ಪ್ರತಿಯೊಬ್ಬರೂ ಸಹ ಬಸ್ ನಿಲ್ದಾಣಗಳಿಗೆ ಆಗಾಗ್ಗೆ ಭೇಟಿನೀಡಬೇಕೆಂದು ಸೂಚಿಸಿದರು.

ಏಕ ಸದಸ್ಯ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಅವರು, ಸಚಿವರಿಗೆ ಈಗಾಗಲೇ ಸಲ್ಲಿಕೆಯಾಗಿರುವ ವರದಿಯ ಪ್ರತಿಯನ್ನು ನೀಡಿ ವರದಿಯ ಪ್ರಮುಖ ಅಂಶಗಳನ್ನು ಸಂಕ್ಷಿಪ್ತ ಪ್ರಾತ್ಯಕ್ಷಿತೆಯ ಮೂಲಕ ವಿವರಿಸಿದರು.

ಇತ್ತೀಚೆಗೆ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತವಡಿಸಿ, ಈ ಯೋಜನೆಯಿಂದ ಸಾರ್ವಜನಿಕ ಸಾರಿಗೆಗೆ ಬಲ ನೀಡಿದಂತಾಗಿದೆ. ಈ ಯೋಜನೆ ಜಾರಿಗೆ ಮೊದಲು ಸಾರಿಗೆ ಸಂಸ್ಥೆಗಳ ಒಟ್ಟು ಪ್ರಯಾಣಿಕರ ಸಂಖ್ಯೆ ಪ್ರತಿದಿನ ಸರಾಸರಿ 84.15 ಲಕ್ಷಗಳಿದ್ದು, ಇಂದು ಸರಾಸರಿ 1.05 ಕೋಟಿಗಳಾಗಿರುವುದು ಶಕ್ತಿಯೋಜನ ಯಶಸ್ವಿಯಾಗಿದೆಯೆಂದು ತಿಳಿಸಿದರು.

ಮುಂದುವರಿದ ದೇಶಗಳಲ್ಲಿ ಸಹ ಸಾರ್ವಜನಿಕ ಸಾರಿಗೆಗೆ ಒತ್ತು ನೀಡಲು ಹಲವು ಮಹತ್ತರ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬಗೆಗಿನ ಮಾಹಿತಿಯನ್ನು ಇದೇ ವೇಳೆ ಸಚಿವರೊಂದಿಗೆ ಹಂಚಿಕೊಂಡು ನಮ್ಮ ರಾಜ್ಯದಲ್ಲಿ ಸಾರಿಗೆಯನ್ನು ಇನ್ನಷ್ಟು ಸದೃಢ ಮಾಡಲು ಸಿಬ್ಬಂದಿಗಳ ಸಮಸ್ಯೆಗೂ ಒತ್ತು ನೀಡಿ ಪರಿಹರಿಸುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ಅನ್ನುಕುಮಾರ್‌, BMTC ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ NWKRTC ವ್ಯವಸ್ಥಾಪಕ ನಿರ್ದೇಶಕ ಎಸ್‌.ಭರತ್, KSRTC ನಿರ್ದೇಶಕ (ಸಿಬ್ಬಂದಿ & ಜಾಗೃತ) ಪ್ರಶಾಂತ್‌ ಕುಮಾರ್‌ಮಿಶ್ರ ಹಾಗೂ ಇಲಾಖಾ ಮುಖ್ಯಸ್ಥರು ಭಾಗವಹಿಸಿದ್ದರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...