CrimeNEWSನಮ್ಮಜಿಲ್ಲೆ

KSRTC ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಗಿಲ್ಲ: ಸುಳ್ಳಿನಿಂದ ಕೂಡಿದೆ ವೈರಲ್ ವಿಡಿಯೋ – ಸ್ಪಷ್ಟಪಡಿಸಿದ ನಿಗಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ತುಂಡಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ.

ಆದರೆ, ಈ ವಿಡಿಯೋ ಸುಳ್ಳಿನಿಂದ ಕೂಡಿದ್ದು, ಇದು ಅಪಘಾತವೊಂದರಲ್ಲಿ ಆಗಿರುವುದು ಎಂಬ ಬಗ್ಗೆ ನಿಗಮವು ಟ್ವೀಟ್‌ ಮಾಡುವ ಮೂಲಕ  ಸ್ಪಷ್ಟನೆ ನೀಡಿದೆ.

ಈ ಮೂಲಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ವಿಡಿಯೋದ ಸತ್ಯಾಂಶ ಇದೀಗ ಬಯಲಾದಂತಾಗಿದೆ.

ಇದೇ ಜೂನ್ 18ರಂದು ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ತಿ.ನರಸೀಪುರಕ್ಕೆ ತೆರಳುತ್ತಿದ್ದ ವೇಳೆ ಅಂದು ಮಧ್ಯಾಹ್ನ ಸುಮಾರು 1:45ರಲ್ಲಿ ಬಸವನಪುರ ಸಮೀಪ  ಎದುರಿನಿಂದ ಬಂದ ಲಾರಿ (TN-77-Q-8735) ಬಸ್‌ನ ಬಲಭಾಗದ ಕಿಟಕಿ ಬಳಿಯ ಆಸನದಲ್ಲಿ ಕುಳಿತಿದ್ದ ಮಹಿಳೆಗೆ ತಾಗಿದೆ ಪರಿಣಾಮ ಮಹಿಳೆಯ ಬಲಕೈಗೆ ತುಂಡಾಗಿದೆ.

ತಕ್ಷಣವೇ ಗಾಯಗೊಂಡ ಆ ಮಹಿಳೆಯನ್ನು ಸಾರಿಗೆ ಅಧಿಕಾರಿಗಳು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಉತ್ತಮ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದರ ಜತೆಗೆ ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆ ಬಸ್‌ನ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಗಮ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಶಕ್ತಿ ಯೋಜನೆ ಬಗ್ಗೆ ಅಪಪ್ರಚಾರ: ರಾಜ್ಯಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಪ್ರಯೋಜನಕಾರಿಯಾಗಿದೆ. ಈಗಾಗಲೇ ಮುಂದಿನ ಹಂತದಲ್ಲಿ ಈ ಯೋಜನೆಯನ್ನು ಕ್ರಮ ಬದ್ಧವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಆದರೆ, ಫ್ರೀ ಬಸ್ ವಿಚಾರದಲ್ಲಿ ಎಲ್ಲೋ ಕೆಲವೆಡೆಗಳಲ್ಲಿ ನಡೆಯುತ್ತಿರುವ ಕೆಲವೇ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು, ಈ ಯೋಜನೆಯೇ ಸರಿ ಇಲ್ಲ, ಜನರಿಗೆ ಪ್ರಯೋಜನವಾಗ್ತಿಲ್ಲ, ಸಮಸ್ಯೆಯಾಗುತ್ತಿದೆ ಎನ್ನುವಂತೆ ಬಿಂಬಿಸಲಾಗುತ್ತಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ.

ರಾಜ್ಯ ಸರ್ಕಾರ ಈಗಾಗಲೇ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದೆ. ಆದರೆ ಈವರೆಗೆ ಯಾವುದೇ ಕ್ರಮಗಳಾದ ಬಗ್ಗೆ ಮಾಹಿತಿ ಇಲ್ಲ.

Leave a Reply

error: Content is protected !!
LATEST
KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ