NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಪ್ರಯಾಣಿಕರು ಸಾರಿಗೆ ಸಿಬ್ಬಂದಿ ಮೇಲೆ ಮಾಡುತ್ತಿರುವ ಮಾರಣಾಂತಿಕ ಹಲ್ಲೆ ತಡೆಗೆ ಕಾನೂನು ಕ್ರಮ ಕೈಗೊಳ್ಳಿ: ಕೂಟ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜೂನ್‌ 11ರಿಂದ ನಾಲ್ಕು ಸಾರಿಗೆ ನಿಗಮಗಳಲ್ಲಿ ಶಕ್ತಿ ಜನೆ ನುಷ್ಠಾನದ ನಂತರ ನಾಲ್ಕು ನಿಗಮಗಳ ಸಾರಿಗೆ ಚಾಲನಾ ಸಿಂದಿಗಳ ಮೇಲೆ ಪ್ರಯಾಣಿಕರು ಮಾಡುತ್ತಿರುವ ಮಾರಣಾಂತಿಕ ಹಲ್ಲೆಗಳನ್ನು ತಡೆಗಟ್ಟಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು (ಜೂನ್‌ 28 ) ಸಾರಿಗೆ ಸಚಿವರನ್ನು ಭೇಟಿ ಮಾಡಿದ ಅವರು, ಸಾರಿಗೆಯ ನಾಲ್ಕು ನಿಗಮಗಳ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಆನುಷ್ಠಾನದಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವ ಜತೆಗೆ ಸಾರಿಗೆ ನಿಗಮಗಳಿಗೂ ಆದಾಯ ಹೆಚ್ಚುತ್ತಿರುವುದು ಸಂತೋಷದ ವಿಷಯ.

ಆದರೆ ದಿಢೀರ್ ಎಂದು ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹಾಗೂ ಸಿಬ್ಬಂದಿಗಳ ಸಂಖ್ಯೆ ಹೊಂದಾಣಿಕೆಯಾಗದೆ ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದರು ನೌಕರರು ಸಹಿಸಿಕೊಂಡು ಒತ್ತಡದಲ್ಲೇ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ.

ಈ ಪರಿಸ್ಥಿತಿಯನ್ನು ಆರ್ಥ ಮಾಡಿಕೊಳ್ಳದ ಕೆಲವು ಪ್ರಯಾಣಿಕರು ಚಾಲನಾ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬರುತ್ತಿದೆ. ಅದನ್ನು ಗಮನಿಸಿದರೆ ಕರ್ತವ್ಯ ನಿರತ ಚಾಲನಾ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸುವುದು ಎಷ್ಟು ಕಷ್ಟ ಎಂಬುವುದು ಗೊತ್ತಾಗುತ್ತದೆ. ಆ ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದ್ದು, ಇದಕ್ಕೆ ತಾವು ಕಾನೂನಾತ್ಮಕವಾಗಿ ಕಡಿವಾಣ ಹಾಕು ಬೇಕು ಎಂದು ಒತ್ತಾಯಿಸಿದರು.

ಇನ್ನು ಈಗಾಗಲೇ ಕ್ಷುಲ್ಲಕ ಕಾರಣಗಳಿಗೆ ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಸಾರ್ವಜನಿಕರ ಮೇಲೆ ಪೊಲೀಸ್ ಕೇಸ್‌ಗಳು ದಾಖಲಿಸಿದರೂ ಸಹ ಮತ್ತೇ ಮತ್ತೇ ಹಲ್ಲೆ ಮಾಡುವ ಪ್ರಕರಣಗಳು ನಡೆಯುತ್ತಿರುವುದು ನೋಡಿದರೆ ಸಾರ್ವಜನಿಕರಿಗೆ ಇನ್ನು ಕಾನೂನು ಭಯ ಬಂದಿಲ್ಲ ಎನಿಸುತ್ತಿದೆ. ಆದರಿಂದ ಈ ರೀತಿಯ ಅವಘಡಗಳಯ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಈ ರೀತಿಯ ಹಲ್ಲೆಗಳು ನಡೆದ ತಕ್ಷಣ ಸಂಬಂಧಪಟ್ಟ ಸಂಸ್ಥೆಯ ಆಧಿಕಾರಿಗಳು ಸಾರಿಗೆ ಸಿಬ್ಬಂದಿಗಳ ನೆರವಿಗೆ ಬಂದು ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನಂತರ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಪೊಲೀಸರು ಕೂಡಲೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಜತೆಗೆ ಸುದ್ದಿಗೋಷ್ಠಿಕರೆದು ಮತ್ತೆ ಹಲ್ಲೆಗಳಾದಂತೆ ಅರಿವು ಮೂಡಿಸಬೇಕು.

ಆಗ ಮಾತ್ರ ಮತ್ತೊಬ್ಬರು ಸಾರಿಗೆ ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವ ಮೊದಲು ಸಾವಿರ ಬಾರಿ ಯೋಚನೆ ಮಾಡುತ್ತಾರೆ ಹಾಗೂ ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ಮಾಡಿದರೆ ಸಂಬಂಧಪಟ್ಟ ಆಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಅವರ ಮೇಲೆ ಹಲ್ಲೆ ಮಾಡಿದರೆ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂಬುವುದನ್ನು ಸಾರ್ವಜನಿಕರಿಗೆ ಕಾಣುವಂತೆ ಬಸ್ ನಿಲ್ದಾಣಗಳಲ್ಲಿ ಬೋರ್ಡ್ ಹಾಕಬೇಕು.

ಈ ಕೂಡಲೆ ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ಸಂಸ್ಥೆ ಕೈಗೊಳ್ಳಬೇಕು, ಒಂದು ವೇಳೆ ಕೈಗೊಳ್ಳದಿದ್ದರೆ ನಮಗೆ ಅನ್ಯ ಮಾರ್ಗವಿಲ್ಲದೆ ಸಿಬ್ಬಂದಿಗಳ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಲು ನಾವು ಕಾನೂನು ಹೋರಾಟಗಳ ಜೊತೆ ಜೊತೆಗೆ ಘಟನಾ ಸ್ಥಳಗಳಲ್ಲಿ ನಮ್ಮ ಕೂಟದ ವತಿಯಿಂದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಕೂಟದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುವುದು. ಅಲ್ಲದೆ ಈ ಸಂಬಂಧ ಸೂಕ್ತ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ