ಬೆಂಗಳೂರು: ಇದೇ ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು (ಜೂನ್ 30) 11ಗಂಟೆಗೆ ಹೊರಬೀಳಲಿದೆ.
ಜೂನ್ 2023ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.
ರಾಜ್ಯದಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ದಿನಾಂಕ ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಮುಂದಾಗಿದೆ.
ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಿ. ಕೂಡಲೇ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ. ಫಲಿತಾಂಶ ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.
2023 ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 8,35,102 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಒಟ್ಟಾರೆ ಶೇಕಡ 83.89 ರಷ್ಟು ಫಲಿತಾಂಶ ದಾಖಲಾಗಿತ್ತು. 3,59,511 ಬಾಲಕಿಯರು ಹಾಗೂ 3,41,108 ಬಾಲಕರು ಉತ್ತೀರ್ಣರಾಗಿದ್ದರು.