CrimeNEWSನಮ್ಮಜಿಲ್ಲೆ

ಸಂಸದ ಪ್ರತಾಪ್‌ ಸಿಂಹ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌: ಹೆಡ್ ಕಾನ್ಸ್‌ಟೇಬಲ್ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಂಸದ ಪ್ರತಾಪ್​ ಸಿಂಹಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಕಾಮೆಂಟ್ ಮಾಡಿದ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ (CHC 478, 2005 ನೇ ಬ್ಯಾಚ್) ಪ್ರಕಾಶ್ ಅಮಾನತುಗೊಂಡ ಪೊಲೀಸ್‌ ನೌಕರ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಪೇಜ್‌ನಲ್ಲಿ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಪೋಸ್ಟ್ ಒಂದಕ್ಕೆ ಸಂಸದ ಪ್ರತಾಪ್ ಸಿಂಹ ಅವರ ವೈಯುಕ್ತಿಕ ವಿಚಾರಗಳನ್ನು ಉದ್ದೇಶಿಸಿ ಕಾಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದರು ಸಂಬಂಧ ಪಟ್ಟ ಹೆಡ್ ಕಾನ್ಸ್ ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಮೀಷನರ್ ಅವರಿಗೆ ಪತ್ರ ಬರೆದಿದ್ದರು.

ಸಂಸದರ ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ