NEWSನಮ್ಮರಾಜ್ಯ

ಬೆಳ್ಳಂಬೆಳ್ಳಗ್ಗೆ ನಂದಿಗಿರಿಧಾಮಕ್ಕೆ ಬಂದ ಪ್ರವಾಸಿಗರಿಗೆ ಶಾಕ್‌ಕೊಟ್ಟ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಬೆಳ್ಳಂಬೆಳ್ಳಗ್ಗೆ ನಂದಿಗಿರಿಧಾಮದತ್ತ ಹೊರಟಿದ್ದ ಪ್ರವಾಸಿಗರಿಗೆ ಅಚ್ಚರಿಯ ನಿರಾಸೆಯಾಗಿದೆ. ಹೀಗಾಗಿ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಪ್ರವಾಸಿಗರು ಅದೇ ದಾರಿಯಲ್ಲೇ ಹಿಂದಕ್ಕೆ ಹೋಗಿದ್ದಾರೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಹಿಲ್ಸ್​ಗೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಭದ್ರತಾ ದೃಷ್ಟಿಯಿಂದ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಹೀಗಾಗಿ ಈ ವಿಚಾರ ತಿಳಿಯದೇ ಆಗಮಿಸಿದ್ದ ಪ್ರವಾಸಿಗರನ್ನು ಪೊಲೀಸರು ತಡೆದಿದ್ದಾರೆ. ನಂದಿಗಿರಿಧಾಮ ಬುಡದ ಪ್ರವೇಶ ದ್ವಾರದಲ್ಲೇ ವಾಹನಗಳನ್ನು ತಡೆದು ಪ್ರವಾಸಿಗರನ್ನು ವಾಪಸ್ ಕಳಿಸುತ್ತಿದ್ದಾರೆ. ಇದರಿಂದ ರಜೆಯ ಮಜ ಸವಿಯಲು ಬಂದಿದ್ದ ಪ್ರವಾಸಿಗರು ನಿರಾಸೆಯಿಂದಲೇ ವಾಪಸ್‌ ಹೋಗಿದ್ದಾರೆ.

ಮುದ್ದೇನಹಳ್ಳಿಗೆ ರಾಷ್ಟ್ರಪತಿ: ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಜಿಲ್ಲಾಧಿಕಾರಿ ರವೀಂದ್ರ ಅವರು ನಂದಿಗಿರಿಧಾಮಕ್ಕೆ 2 ದಿನಗಳ ಕಾಲ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಪ್ರವಾಸಿಗರಿಗೆ ನಂದಿ ಹಿಲ್ಸ್ ವಿಕ್ಷಣೆ ಇನ್ನೆರಡು ದಿನ ಸಾಧ್ಯವಿಲ್ಲ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...