NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿ ಭಾನುವಾರ ನೌಕರರಿಗೆ ಕಾನೂನು ಅರಿವು  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿ ಭಾನುವಾರ ಸಾರಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಕಾನೂನು ಸಲಹೆಗಾರರು ಹಾಗೂ ಸುಪ್ರೀಂ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾರಿಗೆ ನೌಕರರು ಬಸ್‌ ಅಪಘಾತಗೊಂಡ ವೇಳೆ ಯಾವ ರೀತಿ ಕಾನೂನು ಪಾಲಿಸಬೇಕು, ಎಫ್‌ಐಆರ್‌ ಹೇಗೆ ಮಾಡಿಸಬೇಕು? ಎಂಬುವುದು ಸೇರಿದಂತೆ ಹಲವು ರೀತಿಯ ಕಾನೂನು ಅರಿವು ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಈ ಅರಿವು ಕಾರ್ಯಕ್ರಮ ಪ್ರತಿ ಭಾನುವಾರ ಸಂಜೆ 4 ಗಂಟೆಯಿಂದ 6 ಗಂಟೆಯ ವರೆಗೆ ನಡೆಯಲಿದೆ. ಹೀಗಾಗಿ ನಮ್ಮ ಸಂಘದಲ್ಲಿ ಸದಸ್ಯರಾಗಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇದರ ಜತೆಗೆ ಹೊಸದಾಗಿ ಸಂಘದ ಸದಸ್ಯತ್ವ ಪಡೆದುಕೊಂಡು ಇನ್ನು ಹೆಚ್ಚಿನ ನೌಕರರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಅಲ್ಲದೆ ಸಂಘದ ಸದಸ್ಯರು ಈಗಾಗಲೇ ತಮ್ಮದಲ್ಲದ ತಪ್ಪಿನ ಕಾರಣಕ್ಕೆ ಅಮಾನತು ಸೇರಿದಂತೆ ಇತರ ಶಿಕ್ಷೆಗೊಳಗಾಗಿದ್ದಲ್ಲಿ ಅಂಥವರ ಪರವಾಗಿ ನ್ಯಾಯಾಲಯದಲ್ಲಿ ವಕಾಲತು ವಹಿಸಿ ಪ್ರಕರಣವನ್ನು ನಡೆಸಲಾಗುತ್ತಿದೆ.

ಅದೇ ರೀತಿ ಸಂಘದ ಸದಸ್ಯತ್ವ ಪಡೆದು ಎಲ್ಲ ನೌಕರರು ಸಂಘದ ಮೂಲಕ ಕಾನೂನಿನ ಅರಿವನ್ನು ಪಡೆದುಕೊಳ್ಳುವುದರ ಜತೆಗೆ ಧೈರ್ಯವಾಗಿ ಕಾನೂನು ಹೋರಾಟವನ್ನು ಯಾವುದೆ ಶುಲ್ಕವಿಲ್ಲದೆ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇನ್ನು ಪ್ರತಿ ಭಾನುವಾರ ನಡೆಸಲು ಉದ್ದೇಶಿಸಿರುವ ಈ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಮಂದಿ ನೌಕರರು ಭಾಗವಹಿಸಿ ತಮ್ಮ ಸಮಸ್ಯೆ ಹೇಳಿಕೊಳ್ಳುವುದರ ಜತೆಗೆ ಕಾನೂನು ಅರಿವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕಾರ್ಯಕ್ರಮಕ್ಕೆ ಭಾಗವಹಿಸುವವರು ಮೊದಲೇ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸಮವಸ್ತ್ರ ಧರಿಸಿ ಭಾಗವಹಿಸಬೇಕು. ಅಂದು ಎಲ್ಲರಿಗೂ ಉಪಾಹಾರ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಕೆಎಸ್‌ಆರ್‌ಟಿಸಿ ಹುಣಸೂರು ಘಟಕದ ಚಾಲಕ ಗೋವಿಂದರಾಜು, ಉಪಾಧ್ಯಕ್ಷ ಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ಚಾಲಕ ಕಂ ನಿರ್ವಾಹಕ ಜಯದೇವ್‌ ಸೇರಿದಂತೆ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...