NEWSನಮ್ಮರಾಜ್ಯರಾಜಕೀಯ

5 ಗ್ಯಾರಂಟಿ ಜಾರಿಯಲ್ಲಿ ಮಹಾಮೋಸ : ಸಿಎಂ ವಿರುದ್ಧ ಗುಡುಗಿದ ಮಾಜಿ ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.

5 ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಮಹಾಮೋಸ, ಅನಗತ್ಯ ಷರತ್ತುಗಳನ್ನು ಹೇರಿದ್ದಾರೆ ಎಂದು ಆರೋಪಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಇಂದು ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವೇಳೆ ಮಾತು ಮುಂದುವರಿಸಿದ ಯಡಿಯೂರಪ್ಪ, ಇವತ್ತು ಸತ್ಯಾಗ್ರಹ ಮಾಡ್ತಿದ್ದೀವಿ. ಕಾಂಗ್ರೆಸ್‌ನವರು ಕೊಟ್ಟ ಭರವಸೆಗಳನ್ನು ಷರತ್ತಿಲ್ಲದೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು, ಜನರಿಗೆ ಕೊಟ್ಟ ಭರವಸೆಯಂತೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು ಎಂದು ಒತ್ತಾಯಿಸಿದ್ದಾರೆ.

ಇನ್ನು ಪ್ರಮುಖವಾಗಿ ಮಹಿಳಾ ಸ್ವಸಹಾಯ ಸಂಘದ ಸಾಲಮನ್ನಾ ಮಾಡಬೇಕು. ಈ ವಿಚಾರ ಇಟ್ಕೊಂಡು ನಾವು ಹೋರಾಟ ಮಾಡುತ್ತೇವೆ. ಇದು ಇಂದೊಂದೆ ದಿನ ಹೋರಾಟ ನಡೆಯಲಿದೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಈ ರೀತಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಫ್ರೀಡಂಪಾರ್ಕ್‌ನಲ್ಲಿ ಸಂಜೆವರೆಗೂ ಬಿಜೆಪಿ ಧರಣಿ ಸತ್ಯಾಗ್ರಹ ನಡೆಸಲಿದ್ದು, ಪ್ರತಿಭಟನೆಯ ವೇದಿಕೆಯಲ್ಲಿ ಮಾಜಿ ಸಿಎಂ ಹಾಲಿ ಸಂಸದ ಡಿ.ವಿ.ಸದಾನಂದಗೌಡ, ಕೆ.ಎಸ್‌. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ.ನಾಗೇಶ್, ಬಿ.ಸಿ‌.ಪಾಟೀಲ್, ಕೆ.ಸಿ. ನಾರಾಯಣಗೌಡ, ಮುರುಗೇಶ್ ನಿರಾಣಿ, ಎನ್.ಮಹೇಶ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ