CrimeNEWSಆರೋಗ್ಯಮೈಸೂರು

ಕೃಷಿ ಸಚಿವರ ಕೀಳು ಮಟ್ಟದ ರಾಜಕೀಯಕ್ಕೆ KSRTC ನೌಕರ ಬಲಿಯಾಗಬೇಕಾ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ KSRTC ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಜಗದೀಶ್ ಅವರ ಆರೋಗ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್.​​ಡಿ. ಕುಮಾರಸ್ವಾಮಿ ವಿಚಾರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಸಚಿವರ ಕೀಳು ಮಟ್ಟದ ರಾಜಕೀಯಕ್ಕೆ ಸಾರಿಗೆ ನೌಕರನೊಬ್ಬ ಬಲಿಯಾಗುತ್ತಿದ್ದಾನೆ ಇದು ಆಗಬೇಕಾ? ಸಚಿವರಾದವರಿಗೆ ರಾಜ್ಯದ ಜನರ ಜತೆ ಯಾವರೀತಿ ನಡೆದುಕೊಳ್ಳಬೇಕು ಎಂಬ ಅರಿವಿಲ್ಲವೇ ಎಂದು ಕುಮಾರಸ್ವಾಮಿ ಚಲುವರಾಯಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಜಗದೀಶ್ ವೆಂಟಿಲೇಟರ್​ನಲ್ಲಿದ್ದಾರೆ. ಸರ್ಕಾರ ಬಂದು ಐವತ್ತು ದಿನ ಕೂಡ ಆಗಿಲ್ಲ, ಆಗಲೇ ವರ್ಗಾವಣೆ ದಂಧೆ ಶುರುವಾಗಿದೆ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ, ಈ ರೀತಿ ಮಾಡುವುದು ಸರಿಯಲ್ಲ. ಊರಿನಲ್ಲಿರುವ ರೌಡಿ, ಚೇಲಾ‌ ಮಹದೇವ ಎಂಬಾತ ಜಗದೀಶ್ ಅವರ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮತ್ತೊಂದೆಡೆ ಜಗದೀಶ್​​ಗೆ ಅಧಿಕಾರಿಗಳ ಮೂಲಕ‌ ಕಿರುಕುಳ ಕೊಡಲಾಗಿದೆ. ಡೆತ್​ನೋಟ್‌ನಲ್ಲಿ‌ ಜಗದೀಶ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ, ಒತ್ತಡ ಇದೆ ಎಂದು ಅಧಿಕಾರಿಗಳು‌ ಹೇಳಿದ್ದಾರೆ ಅಂತಾ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ. ಮಂತ್ರಿ ಸ್ಥಾನ ಏನು ಶಾಶ್ವತನಾ ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಸತ್ತಿಲ್ಲ, ಅದ್ಕೆ FIR ಹಾಕಿಲ್ಲ ಅಂತಾರೆ: ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ. ಆ ಕಾರಣಕ್ಕೆ ಎಫ್‌ಐಆರ್ ಹಾಕಿಲ್ಲ ಅಂತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜತೆ ಚೆಲ್ಲಾಟವಾಡಲು ಅಲ್ಲ. ನಿನ್ನೆ ಅವರ ಕುಟುಂಬಕ್ಕೆ ಕರೆ ಮಾಡಿದಾಗ ಕುಟುಂಬದವರು ಕಣ್ಣೀರಿಟ್ಟರು. ರಾತ್ರಿ 1.30ಕ್ಕೆ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ತಮ್ಮ ಕೈಯಲ್ಲಿ ಆದ ಪ್ರಯತ್ನವನ್ನು ಮಾಡುತ್ತೇನೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ತಕ್ಷಣ ಈ ಮಂತ್ರಿಯನ್ನು ವಜಾ ಮಾಡಬೇಕು. ಸರಿಯಾದ ತನಿಖೆ ನಡೆಸಿ. ಕೀಳು ಮಟ್ಟದ ರಾಜಕಾರಣ ಮಾಡುತ್ತಿರುವವರನ್ನು ಕೂಡಲೇ ಕಿತ್ತುಹಾಕುಬೇಕು ಎಂದು ಆಗ್ರಹಿಸಿದ ಅವರು, ನನ್ನ ಕ್ಷೇತ್ರ ಚನ್ನಪಟ್ಟಣದಲ್ಲಿ ಅಧಿಕಾರದ ಅವಧಿಯಲ್ಲಿ ಒಂದೇ ಒಂದು ಅಧಿಕಾರಿಯನ್ನು ವರ್ಗಾವಣೆ ಮಾಡಿಲ್ಲ. ಚಲುವರಾಯಸ್ವಾಮಿ ಜೀವದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವನ್ನೇ ಪ್ರಶ್ನೆ ಎತ್ತುತ್ತೇನೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ