CrimeNEWSನಮ್ಮಜಿಲ್ಲೆನಮ್ಮರಾಜ್ಯಮೈಸೂರು

KSRTC: ನಾಗಮಂಗಲ ಘಟಕದ ನೌಕರನ ಆತ್ಮಹತ್ಯೆ ಯತ್ನ – ಕೊನೆಗೂ ಮೌನ ಮುರಿದ ಸಚಿವ ಚಲುವರಾಯಸ್ವಾಮಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಗಮಂಗಲ ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್ ಅವರ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಅನಾವಶ್ಯಕ ರೀತಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದೇ ಅವರ ಕಾಯಕ. ವರ್ಗಾವಣೆ ಪ್ರಕ್ರಿಯೆ ಸಹಜ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ, ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ ಎಂದರು.

ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ದರು. ಹಾಗಾಗಿ ಅದನ್ನು ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದರೂ ತಪ್ಪಿದ್ದರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಎಂದು ಒತ್ತಾಯಿಸಿ ನಿನ್ನೆ ಈ ರೀತಿ ಮಾಡಿಕೊಂಡಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಜಗದೀಶ್‌ ಅವರು ಸಚಿವರ ಶಿಫಾರಸ್ಸಿನ ಮೇರೆಗೆ ನನ್ನನ್ನು ವರ್ಗಾವಣೆ ಮಾಡಿದ್ದಾರೆ. ನನಗೆ ಹಿರಿಯ ಅಧಿಕಾರಿಗಳು ಕೊಟ್ಟಿರುವ ಟಾರ್ಚರ್​​​ನಲ್ಲಿ ಸಚಿವರ ಕೈವಾಡ ಇದೆ ಎಂದು ಆತ್ಮಹತ್ಯೆಗೆ ಯತ್ನಿಸಿ ಸದ್ಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪ್ರಶ್ನೆ ಮಾಡಿದ್ದಾರೆ. ಈ ನಡುವೆ ತಮ್ಮ ಮೇಲೆ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ಚಲುವರಾಯಸ್ವಾಮಿ ಈ ರೀತಿ ಪ್ರತಿಕ್ರಿಯೆ ನೀಡಿದ್ದು, ಮುಂದೆ ಯಾವ ಹಂತಕ್ಕೆ ಹೋಗುತ್ತದೆಯೋ ಕಾದು ನೋಡಬೇಕಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...