ಬೆಂಗಳೂರು: ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇನ್ನು ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.
ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.
ನಾಡಿನ ಏಳು ಕೋಟಿ ಕನ್ನಡಿಗರೂ ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿ ಆಗಬೇಕು ಎಂಬ ಸದಾಶಯದೊಂದಿಗೆ ರೂಪಿಸಿರುವ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ಅಭಿವೃದ್ಧಿ ಮಾದರಿಯ ಬಜೆಟ್ ಇದಾಗಿದೆ.
ಅಲ್ಲದೆ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
“ಶಕ್ತಿ ಯೋಜನೆ” •ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ •ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ.
•ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆ ಕೈಗೊಳ್ಳಲು ಅವಕಾಶ. •ಮಹಿಳೆಯರಿಗೆ ಪ್ರಯಾಣ ವೆಚ್ಚದ ಉಳಿತಾಯ ಹಾಗೂ ಸುರಕ್ಷಿತ ಪ್ರಯಾಣದ ವಾತಾವರಣ. •ಪ್ರತಿ ದಿನ ಸುಮಾರು 50 – 60 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಬಜೆಟ್ನಲ್ಲಿ ಸಿಎಂ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿ ರಾಜ್ಯ ಬಜೆಟ್ನ ಸಂಪೂರ್ಣ ವಿವರಗಳನ್ನೊಳಗೊಂಡ ಪಿಡಿಎಫ್ ಫೈಲ್ ನಿಮಗಾಗಿ ವಿಜಯಪಥದಲ್ಲಿ 1_BudgetSpeechJULY2023-24(Kan)