CrimeNEWSನಮ್ಮಜಿಲ್ಲೆಸಂಸ್ಕೃತಿ

ನಾಪತ್ತೆಯಾಗಿದ್ದ ಜೈನ ಮುನಿಗಳ ಕೊಲೆ- ಕೇಸ್‌ ಭೇದಿಸಿದ ಚಿಕ್ಕೋಡಿ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಇದೇ ಜುಲೈ 6ರಂದು ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದರು.

ಇದೀಗ ದುಷ್ಕರ್ಮಿಗಳು ನಂದಿಪರ್ವತ ಆಶ್ರಮದ ಜೈನಮುನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿದ್ದ ಜೈನಮುನಿ ಜುಲೈ 6ರಂದು ನಾಪತ್ತೆ ಆಗಿದ್ದರು. ಹೀಗಾಗಿ ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಹುಡುಕಾಡಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು.

ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ದೂರು ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡು‌ ತನಿಖೆ ಕೈಗೊಂಡಿದ್ದ ಪೊಲೀಸರು, ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆ ವೇಳೆ ಜೈನಮುನಿಯ ಹತ್ಯೆಯ ರಹಸ್ಯ ಬಯಲಾಗಿದೆ.

ಕೆಲವು ವರದಿಗಳ ಪ್ರಕಾರ, ಆಸ್ತಿಗಾಗಿ ಜೈನಮುನಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಪೂರ್ಣ ತನಿಖೆ ಬಳಿಕವೇ ಅಸಲಿ ಸತ್ಯ ಬಯಲಾಗಲಿದೆ. ಒಟ್ಟಾರೆ ಮುನಿಗಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು ಅವರನ್ನು ಸುಮ್ಮನೆ ಬಿಡಬೇಡಿ ಎಂದು ಭಕ್ತರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...