ಬೆಂಗಳೂರು: ಬೆಂಗಳೂರಿನ ಸೀಗೇಹಳ್ಳಿ ಮತ್ತು ದೊಡ್ಡಬಿದರಕಲ್ಲು ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಭೇಟಿ ನೀಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಿಶೀಲನೆ ನಡೆಸಿದರು.
ಮೊದಲು ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಅವರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು ಅದನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಇದಿಷ್ಟೇ ಅಲ್ಲದೆ ಈ ಕುರಿತು ಹಿಂದೆಯೂ ಕೂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ಮಂಡಳಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದನ್ನು ಅಳವಡಿಸಿಕೊಂಡು ಉತ್ತಮ ವಾತಾವಣ ಸೃಷ್ಟಿಸಲಾಗುವುದು ಎಂದರು.
ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ: ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 120 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಮಾರ್ಥ್ಯವಿದ್ದು, ಸದ್ಯ ಸಂಸ್ಕರಣಾ ಘಕಟವು ಚಾಲ್ತಿಯಲ್ಲಿ ಇರುವುದಿಲ್ಲ. ಅದನ್ನು ಕೂಡಲೆ ಪ್ರಾರಂಭಿಸಲು ಸೂಚನೆ ನೀಡಿದರು.
ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ: ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 350 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 350 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದೆ. ಪ್ರತಿನಿತ್ಯ ನಿತ್ಯ ಎಷ್ಟು ಕಾಂಪ್ಯಾಕ್ಟರ್ ಬರುತ್ತದೆ, ಅದಕ್ಕೆ ಅಳವಡಿಸಿರುವ ಜಿ.ಪಿ.ಎಸ್ ಅನ್ನು ಪರಿಶೀಲಿಸಿದರು.
ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ: ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 150 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 110 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದ್ದು, ಅದನ್ನು ಪರಿಶೀಲನೆ ನಡೆಸಿದರು.
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಾ. ಹರಿಶ್ ಕುಮಾರ್, ವಲಯ ಜಂಟಿ ಆಯುಕ್ತ ಜಗದೀಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.