CrimeNEWSನಮ್ಮಜಿಲ್ಲೆಮೈಸೂರು

ತಿ.ನರಸೀಪುರ: ಹನುಮಜಯಂತಿ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತ ಕೊಲೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ನಿನ್ನೆ (ಜು.9) ಹನುಮಜಯಂತಿಯ ವೇಳೆ ನಡೆದ ಗಲಾಟೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ನಡೆದಿದ್ದು, ಈ ಹಿನ್ನೆಲೆಯಲ್ಲಿ 6 ಮಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ತಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯ ನಿವಾಸಿ ವೇಣುಗೋಪಾಲ್​ ನಾಯಕ್​ (32) ಕೊಲೆಯಾದ ಯುವಕ.

ಪಟ್ಟಣದ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.

ಹನುಮ ಜಯಂತಿ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಒಂದು ಗುಂಪ್ಪಿನ ಯುವಕರು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ತಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾಗಿದ್ದಾನೆ.

ಈ ಸಂಬಂಧ ತಿ. ನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...