CrimeNEWSನಮ್ಮಜಿಲ್ಲೆ

ಬೈಕ್‌-KSRTC ಬಸ್‌ ನಡುವೆ ಅಪಘಾತ: ಸ್ಥಳದಲ್ಲೇ ಒಬ್ಬ ಸಾವು ಮತ್ತೊಬ್ಬನಿಗೆ ತೀವ್ರ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಮನಗರ-ಮಾಗಡಿ ರಸ್ತೆಯ ಜೋಡುಗಟ್ಟೆ ತಿರುವಿನ ಬಳಿ ನಡೆದಿದೆ.

ಹಾರೋಹಳ್ಳಿ ಸಮೀಪದ ಬಿಲ್ಲನಕುಪ್ಪೆಯ ದರ್ಶನ್ ಎಂಬ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟವರು. ಇನ್ನು ಹಿಂಬದಿ ಸವಾರ ಶರತ್ ಗಂಭೀರವಾಗಿ ಗಾಯಗೊಂಡಿದ್ದು ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಂದು ಬೆಳಗ್ಗೆ 70.40ರ ಸುಮಾರಿನಲ್ಲಿ ಅವಘಡ ಸಂಭವಿಸಿದ್ದು, ಬೈಕ್‌ ಸವಾರ ವಿದ್ಯಾರ್ಥಿಗಳ ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ತಿರುವಿನಲ್ಲಿ ವೇಗವಾಗಿ ಬಂದು ಬಲಗಡೆಯಲ್ಲಿ ಬರುತ್ತಿದ್ದ ಬಸ್‌ಗೆ ನೇರವಾಗಿ ಡಿಕ್ಕಿಯಾಗಿದೆ. ಪರಿಣಾಮ ತಲೆ ಛಿದ್ರವಾಗಿ ಒಂದುಕಾಲು ಕೂಡ ಮುರಿದು ಹೋಗಿದೆ. ಇನ್ನು ಮೃತನ ಕೈ ಬಸ್‌ ಮುಂಭಾಗ ಸಿಲುಕಿಕೊಂಡಿದ್ದು ಆ ಭೀಕರತೆಯನ್ನು ಹೇಳುವಂತಿದೆ.

ಇನ್ನು ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತನು ತಲೆಗೆ ಹೆಲ್ಮೆಟ್ ಧರಿಸದೆ ಇದ್ದಿದ್ದರಿಂದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಆತ ಸ್ಥಳದಲ್ಲೆ ಅಸುನೀಗಿದ್ದಾನೆ. ಒಂದು ವೇಳೆ ಹೆಲ್ಮೆಟ್ ಧರಿಸಿದ್ದರೆ ಆತನ ಜೀವ ಉಳಿಯುತ್ತಿತ್ತೋ  ಏನೋ ಎಂದು ಸ್ಥಳದಲ್ಲಿದ್ದವರು ಹೇಳುತ್ತಿದ್ದರು.

ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಇಂದು ಹಾರೋಹಳ್ಳಿ ಇಂದ ಮಾಗಡಿಗೆ ಪರೀಕ್ಷೆ ಬರೆಯಲು ಹೋಗುತ್ತಿದ್ದರು. ಇನ್ನು ಪರೀಕ್ಷೆ ಬರೆಯಲು ತಡವಾಗುತ್ತದೆ ಎಂದು ಅತಿವೇಗದಲ್ಲಿ ವಾಹನ ಚಲಾಯಿಸಿಕೊಂಡು ಬರುತ್ತಿದ್ದದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...