NEWSನಮ್ಮಜಿಲ್ಲೆನಮ್ಮರಾಜ್ಯ

ಏ.28ರಂದು KSRTC ಮುಷ್ಕರದ ವೇಳೆ ವಜಾಗೊಂಡ ನೌಕರರ ಸಂಬಂಧ ಚರ್ಚಿಸಲು ಸಚಿವರ ಅಧ್ಯಕ್ಷತೆಯಲ್ಲಿ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2020 ಜನವರಿ 1ರಿಂದ ವೇತನ ಹೆಚ್ಚಳವಾಗಬೇಕು ಎಂದು ಆಗ್ರಹಿಸಿ ಸುಮಾರು 15 ದಿನಗಳ ಕಾಲ ಮುಷ್ಕರ ಮಾಡಿದ ಸಾರಿಗೆಯ ನೂರಾರು ನೌಕರರು ಹಾಗೂ ಅವರ ಕುಟುಂಬದವರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳು ಹಾಗೂ ವಜಾಗೊಂಡ ನೌಕರರ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಏ.28ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ.

ಇದೇ ಏ.15ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಆ ಸಭೆಯಲ್ಲಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಲಾಗಿತ್ತು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2021ರ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ನೌಕರರು ಹಾಗೂ ಅವರ ಕುಟುಂಬದವರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಎಲ್ಲ ಸಂಘನೆಗಳೂ ಒತ್ತಾಯಿಸಿದವು. ಆ ವೇಳೆ ಅತೀಶೀಘ್ರದಲ್ಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು.

ಅದರಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ಸಂಸ್ಥೆಯಲ್ಲಿ ವಜಾಗೊಂಡ ನೌಕರರ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಏ.28ರ ಸೋಮವಾರ ಮಧ್ಯಾಹ್ನ:12 ಗಂಟೆಗೆ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.

ಈ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಚಿವರ ಸೂಚನೆ ಮೇರೆಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಸಭೆಗೆ ಅಂಧು ಹಾಜರಾಗುವಂತೆ ಸೂಚಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ