ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.27 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು ಏ.28ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಒಂದು ದಿನ ಮುಂಚಿತವಾಗಿ ಏ.27ಕ್ಕೆ ಪೂರ್ವ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ತಪ್ಪದೇ ನಿರ್ವಹಿಸಿ ಎಂದರು.
ಆಯಾ ಇಲಾಖೆಗಳು ಫಲಾನುಭವಿಗಳನ್ನು ಕರೆ ತರಬೇಕು. ಶಿಷ್ಟಾಚಾರದಂತೆ ಸಚಿವರು, ಶಾಸಕರು ಜನಪ್ರತಿನಿಧಿಗಳನ್ನು ಆಹ್ವಾನಿಸಿ. ಫಲಾನುಭವಿಗಳ ಸವಲತ್ತು ವಿತರಣೆಗೆ ಆಯಾ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಿ, ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆ, ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related
