ಕೆಎಸ್ಆರ್ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಇದೇ ಏ.28ರಂದು “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್ 01, 2014ರ ನಂತರ ನಿವೃತ್ತರಾದ ಇಪಿಎಸ್ ಪಿಂಚಣಿದಾರರಿಗೆ ಸಂಬಂಧಿಸಿದಂತೆ, ಸರ್ವೋಚ್ಚ ನ್ಯಾಯಾಲಯವು ನವೆಂಬರ್ 04, 2022 ರಂದು ನೀಡಿದ ತನ್ನ ತೀರ್ಪಿನಲ್ಲಿ, ಕಂಡಿಕೆ 44 (iv) ರಲ್ಲಿ ಸ್ಪಷ್ಟ ಆದೇಶ ನೀಡಿ, ವಿನಾಯ್ತಿ ಅಥವಾ ವಿನಾಯ್ತಿಯೇತರ ( exempted or unexempted) ಸಂಸ್ಥೆಯ ಎಲ್ಲ ನೌಕರರಿಗೆ ಅಧಿಕ ಪಿಂಚಣಿಯನ್ನು ಲೆಕ್ಕಾಚಾರ ಮಾಡಿ ನೀಡಬೇಕೆಂದು ಉಲ್ಲೇಖಿಸಿದೆ.
ಅದರಂತೆ ಇಪಿಎಫ್ಒ ಅಧಿಕಾರಿಗಳು ನಮ್ಮಿಂದ ಜಂಟಿ ಆಯ್ಕೆ ಪತ್ರ ಪಡೆದು, ಎರಡುವರೆ ವರ್ಷಗಳ ನಂತರ, ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿ, ವಿನಾಯ್ತಿ ಸಂಸ್ಥೆಗಳ ನಿವೃತ್ತ ನೌಕರರ ಜಂಟಿ ಆಯ್ಕೆ ಪತ್ರಗಳನ್ನು ತಿರಸ್ಕರಿಸಿ, ಅಧಿಕಾರಿಗಳು ನೀಡಿರುವ ಹಿಂಬರಹ ಅಕ್ಷಮ್ಯ ಅಪರಾದವಾಗಿದೆ. ಮಾತ್ರವಲ್ಲದೇ ನ್ಯಾಯಾಲಯದ ತೀರ್ಪಿನ ಉಲ್ಲಂಘನೆಯಾಗಿದೆ.
ಹೀಗಾಗಿ ಅಧಿಕ ಪಿಂಚಣಿ ಬಯಸಿ, ಜಂಟಿ ಆಯ್ಕೆ ಪತ್ರ ಸಲ್ಲಿಸಿರುವ ಎಲ್ಲ ಇಪಿಎಸ್ ಪಿಂಚಣಿದಾರರು ಈ ಹೋರಾಟದಲ್ಲಿ ಭಾಗಿಯಾಗಬೇಕು. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಪಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರೆ ನೀಡಿದ್ದಾರೆ.
ಕನಿಷ್ಠ ಹೆಚ್ಚುವರಿ ಪಿಂಚಣಿಗೆ ₹7,500 + ಭತ್ಯೆ, ವೈದ್ಯಕೀಯ ಸೌಲಭ್ಯವನ್ನು ನೀಡಬೇಕೆಂದು ಆಗ್ರಹಿಸಿ, ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ, ಇಪಿಎಸ್ ನಿವೃತ್ತರ ಪರ ದೇಶಾದ್ಯಂತ ನಡೆಯುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪಿದೆ.
ಇನ್ನು ನಮ್ಮ ರಾಜ್ಯದವರೇ ಆದ ಬಸವರಾಜ ಬೊಮ್ಮಾಯಿ ಅವರು ಪಾರ್ಲಿಮೆಂಟರಿ ಕಮಿಟಿ ಅಧ್ಯಕ್ಷರಾಗಿದ್ದು, ಈ ಕಮಿಟಿಯು ಕೇಂದ್ರ ಸರ್ಕಾರಕ್ಕೆ ಇಪಿಎಸ್ ನಿವೃತ್ತರ ಪರವಾಗಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದ್ದು, ಈಗ ನೀಡುತ್ತಿರುವ ಕನಿಷ್ಠ ಪಿಂಚಣಿ ₹1,000 ದಿಂದ ₹7,500ಕ್ಕೆ ನಿಗದಿಪಡಿಸಿ, ನಿಯತಕಾಲಿಕ ಭತ್ಯೆ ಸೇರಿಸಿ, ಪಿಂಚಣಿ ನೀಡಬೇಕೆಂದು ಶಿಫಾರಸ್ಸು ಮಾಡಿದ್ದು, ಪ್ರಸ್ತಾವನೆ ಕೇಂದ್ರ ಸರ್ಕಾರದ ಉನ್ನತ ಸಚಿವರ ಕಾರ್ಯಾಲಯದಲ್ಲಿ ಸಕಾರಾತ್ಮಕ ಪರಿಶೀಲನೆಯಲ್ಲಿದೆ. ಇದು ಜಾರಿಯಾದಲ್ಲಿ, ಎಲ್ಲ 78 ಲಕ್ಷ್ಯ ಇಪಿಎಸ್ ನಿವೃತ್ತರಿಗೆ ಅನ್ವಯವಾಗಲಿದೆ.(ಯಾರು ಸಹ ಯುಟ್ಯೂಬ್ ಸಂದೇಶಗಳನ್ನು ನಂಬಬೇಡಿ) ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್ಟಿಸಿ ಹಾಗೂ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ನಮ್ಮ ಕೂಗು ದೆಹಲಿಗೆ ತಲಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸಲು ಎನ್ಎಸಿ ಮುಖ್ಯ ಸಂಯೋಜಕ ರಮಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ಪ್ರಚಲಿತ ಸಂಗತಿ ಹಾಗೂ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಏ.28ರ ಸೋಮವಾರ ಬೆಳಗ್ಗೆ 10:30 ಗಂಟೆಗೆ (ಬೇಸಿಗೆ ಬಿಸಿಲು ವಿಪರೀತ ಇರುವುದರಿಂದ, ಪ್ರತಿಭಟನೆಯನ್ನು 10:30 ಕ್ಕೆ ಸರಿಯಾಗಿ ಪ್ರಾರಂಭಿಸಲಾಗುವುದು) ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದು, ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಕಾರ್ಯಕಾರಿ ಸಮಿತಿ ಪರವಾಗಿ ನಂಜುಂಡೇಗೌಡ ಮನವಿ ಮಾಡಿದ್ದಾರೆ.
Related
