CrimeNEWSದೇಶ-ವಿದೇಶ

ಕಿಡಿಗೇಡಿಗಳ ಗುಂಪು: ಇಬ್ಬರು ಮಹಿಳೆಯರ ಬೆತ್ತಲೇ ಮೆರವಣಿಗೆ ಮಾಡಿ ಬಳಿಕ ಅತ್ಯಾಚಾರ

ವಿಜಯಪಥ ಸಮಗ್ರ ಸುದ್ದಿ

ಮಣಿಪುರ: ಇಲ್ಲಿ ನಡೆದ ಹಿಂಸಾಚಾರ, ಗಲಭೆ, ದಾಳಿಗೆ ಬಹುತೇಕ ರಾಜ್ಯವೇ ಸುಟ್ಟುಹೋಗಿದೆ. ಈ ನಡುವೆಯೇ ಮೇ 4 ರಂದು ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ ಮಾಡಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.

ಮೇ 4 ರಂದು ನಡೆದಿದೆ ಎನ್ನಲಾಗಿರುವ ಈ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ! ಇದರಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಮೂರ್ನಾಲ್ಕು ತಿಂಗಳುಗಳಿಂದ ಮಣಿಪುರ ಬೇಡದ ವಿಚಾರಗಳಿಗೆ ಹೆಚ್ಚು ಸುದ್ದಿಯಾಗುತ್ತಿದೆ. ಜನಾಂಗೀಯ ಹಿಂಸಾಚಾರಕ್ಕೆ ಒಳಗಾಗಿರುವ ಮಣಿಪುರದಲ್ಲಿ, ಅಮಾನುಷ ಕೃತ್ಯಗಳು ನಡೆದು ಹೋಗಿವೆ.

ಏನಿದು ವಿಡಿಯೋ..?: ಕಂಗ್ಪೊಕ್ಪಿ ಜಿಲ್ಲೆಯಲ್ಲಿ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದು, ಬಳಿಕ ಮೆರವಣಿಗೆ ಮಾಡಿದ ವಿಡಿಯೋ ಅದಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಯುವತಿ ಕುಕಿ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ. ಆಕೆಗೆ ಕೇವಲ 19 ವರ್ಷ.

ಕಿಡ್ನಾಪ್ ಮಾಡಿ ವಿಕೃತಿ..!: ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಅಪಹರಿಸಿ ವಿವಸ್ತ್ರಗೊಳಿಸಲಾಗಿದೆ. ನಂತರ 19 ವರ್ಷದ ಯುವತಿ ಮೇಲೆ ರೇಪ್ ನಡೆದಿದೆ. ಮಾತ್ರವಲ್ಲ, ಈಕೆಯ ತಮ್ಮನನ್ನು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯವನ್ನು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಖಂಡಿಸಿದ್ದು, ಮನುಷ್ಯತ್ವ ಅಪರಾಧದ ವಿರೋಧಿಯಾಗಿದೆ. ವಿಡಿಯೋ ಆಧಾರದ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಆದೇಶ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಂದು ಏನಾಗಿತ್ತು ಮಣಿಪುರದಲ್ಲಿ..?: ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಈ ಘಟನೆ ಬಗ್ಗೆ ಮೇ 4 ರಂದೇ ನಮಗೆ ದೂರು ಬಂದಿದೆ. ಆದರೆ ಅಪರಿಚಿತರ ವಿರುದ್ಧ ಜೂನ್ 21 ರಂದು ಗ್ಯಾಂಗ್​ ರೇಪ್​​, ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದು ಕೊಂಗ್ಪೊಕ್ಪಿ ಜಿಲ್ಲೆಯಲ್ಲಿ ನಡೆದಿದೆ ಎಂದಿದ್ದಾರೆ.

ಅಂದು 800 ರಿಂದ 1000 ಮಂದಿ ಶಸ್ತ್ರಸಜ್ಜಿತವಾಗಿ ಬಂದು ಮಣಿಪುರದಲ್ಲಿ ಹಿಂಸಾಚಾರ ಮಾಡಿದ್ದರು. ಇವರು, AK ರೈಫಲ್ಸ್​​, ಎಸ್​​ಎಎಲ್​​ಆರ್ (SALR)​, ಐಎನ್​​​ಎಸ್​​ಎಎಸ್ (INSAS)​ ಮತ್ತು 303 ರೈಫಲ್ಸ್​​ ಹಿಡಿದು ಗ್ರಾಮಗಳಿಗೆ ನುಗ್ಗಿದ್ದರು. ಗ್ರಾಮದಲ್ಲಿದ್ದ ಅಂಗಡಿ, ಮನೆ-ಮಠಗಳನ್ನು ಧ್ವಂಸ ಮಾಡಿ ಹಿಂಸಾಚಾರ ನಡೆಸಿದ್ದರು.

ಮೂವರನ್ನು ವಿವಸ್ತ್ರಗೊಳಿಸಿದ್ದರು: ಇದೇ ಸಂದರ್ಭದಲ್ಲಿ ಗ್ರಾಮದಲ್ಲಿದ್ದ ಐವರನ್ನು ಅಪಹರಿಸಲಾಗಿತ್ತು. ಅವರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಅಪಹರಣಕ್ಕೆ ಒಳಗಾಗಿದ್ದರು. ಪೊಲೀಸ್ ಠಾಣೆಯಿಂದ ಸುಮಾರು 2 ಕಿಲೋ ಮೀಟರ್ ದೂರದಲ್ಲಿರುವ ಕಾಡಿಗೆ ಅವರನ್ನು ಎಳೆದೊಯ್ದಿದ್ದರು.

ಅಲ್ಲಿ ಅತ್ಯಾಚಾರಿಗಳ ತಂಡ ಮೊದಲು ಓರ್ವ ವ್ಯಕ್ತಿಯನ್ನು ಕೊಲೆ ಮಾಡಿದೆ. ನಂತರ ಮೂವರು ಮಹಿಳೆಯರ ನಗ್ನಗೊಳಿಸಿದ್ದಾರೆ. ಅವರ ಎದುರಲ್ಲೇ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆ ಬಳಿಕ ಯುವತಿಯನ್ನು ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ.

ವಿಪಕ್ಷಗಳಿಂದ ಖಂಡನೆ..!: ಮಣಿಪುರದಲ್ಲಿ ನಡೆದ ಘಟನೆಯನ್ನು ವಿಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ಮಣಿಪುರದಲ್ಲಿ ನಡೆದಿರುವ ಈ ಘಟನೆ ಆತಂಕಕಾರಿ. ಸಾರ್ವಜನಿಕರು ಯಾರೂ ಕೂಡ ಇಂತಹ ವಿಡಿಯೋಗಳನ್ನು ಶೇರ್ ಮಾಡಬಾರದು ಎಂದು ಮನವಿ ಮಾಡಿಕೊಳ್ತೇನೆ. ಇಂತಹ ಕೃತ್ಯಗಳು ನಾಚಿಕೆಗೇಡಿನ ಸಂಗತಿ, ಇದನ್ನು ಯಾರೂ ಕೂಡ ಸಹಿಸಬಾರದು ಎಂದಿದ್ದಾರೆ.

ನಾರಿ ಶಕ್ತಿಗೆ ಎಲ್ಲಿದೆ ನ್ಯಾಯ..?: ತೃಣಮೂಲ ಕಾಂಗ್ರೆಸ್​ ಎಂದಿನಂತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಮಣಿಪುರದಲ್ಲಿ ಇಂತಹ ಕೃತ್ಯಗಳು ನಡೆದರೂ, ನಮ್ಮ ಪ್ರಧಾನಿಗಳು ಕಣ್ಮುಚ್ಚಿ ಕೂತಿದ್ದಾರೆ. ಅವರು ಮೌನ ಮುರಿಯಬೇಕಿದೆ. ಕಳೆದ 78 ದಿನಗಳಿಂದ ಹಿಂಸಾಚಾರಕ್ಕೆ ಸಂಬಂಧಿಸಿದ ಸುದ್ದಿಗಳು ಬರುತ್ತಲೇ ಇವೆ. ನಾರಿ ಶಕ್ತಿ ಎಂದು ಹೇಳಿಕೊಳ್ಳುವ ಬಿಜೆಪಿ, ಎಲ್ಲಿ ಅವರಿಗೆ ನ್ಯಾಯ ಒದಗಿಸಿದೆ ಎಂದು ಟ್ವೀಟ್ ಮಾಡಿದೆ.

ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ, ಮಣಿಪುರ ಹಿಂಸಾಚಾರ ಬಗ್ಗೆ ಯಾಕೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಣ್ಮುಚ್ಚಿ ಕೂತಿದೆ. ಈ ರೀತಿಯ ವಿಡಿಯೋಗಳನ್ನು ನೋಡಿದಾಗಲೂ ಅವರ ಮನಸ್ಸು ಕಲುಷಿತಗೊಳ್ಳುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...