NEWSನಮ್ಮರಾಜ್ಯಬೆಂಗಳೂರುರಾಜಕೀಯ

ಸರ್ಕಾರದ ವಿರುದ್ಧ ಆಕ್ರೋಶ: ಜು.27ರ ಮಧ್ಯರಾತ್ರಿವರೆಗೂ ರಸ್ತೆಗಿಳಿಯಲ್ಲ ಆಟೋ, ಕ್ಯಾಬ್‌, ಖಾಸಗಿ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಶಕ್ತಿಯೋಜನೆ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವುದರಿಂದ ಪ್ರಸ್ತುತ ಖಾಸಗಿ ಬಸ್‌, ಆಟೋ, ಕ್ಯಾಬ್‌ಗಳ ಬೇಡಿಕೆ ಕಡಿಮೆ ಆಗಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಈ ಎಲ್ಲರೂ ಮುಂದಾಗಿದ್ದಾರೆ.

ಇದೇ ಜುಲೈ 27 ರಂದು ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ ಮಾಲೀಕರು ಮತ್ತು ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದು, ಹೀಗಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಕೆಲ ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಶಕ್ತಿ ಯೋಜನೆ, ವೈಟ್ ಬೋರ್ಡ್ ವಾಹನವನ್ನು ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ.

ಸರ್ಕಾರದ ಈ ನೀತಿಗಳಿಂದ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಚಾಲಕರು ಮಾಡಿರುವ ಸಾಲ, ವಿಮೆ ಕಟ್ಟಲು ಮತ್ತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ 23 ಸಾರಿಗೆ ಸಂಘಟನೆಗಳು ಸೇರಿ ಪ್ರತಿಭಟನೆಗೆ ಮುಂದಾಗುತ್ತಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ...