CrimeNEWSನಮ್ಮಜಿಲ್ಲೆ

ಶೌಚಕ್ಕೆ ತೆರಳಿದ ವೇಳೆ ಶೌಚಾಲಯ ಗೋಡೆ ಕುಸಿತ : ಮೂವರು ಮಹಿಳೆಯರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಶೌಚಕ್ಕೆ ತೆರಳಿದ ವೇಳೆ ಸಾರ್ವಜನಿಕ ಶೌಚಾಲಯ ಕುಸಿದು ಮೂವರು ಮಹಿಳೆಯರು ಗಾಯಗೊಂಡ ಘಟನೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ಶೌಚಕ್ಕೆ ತೆರಳಿದ ಮಹಿಳೆಯರ ಮೇಲೆ ಗೋಡೆ ಕುಸಿದ್ದು ತಕ್ಷಣ ಅವರನ್ನು ಹೊರ ತೆಗೆದು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗ್ರಾಮದ ನಿವಾಸಿಗಳಾದ ಕಮಲಾಬಾಯಿ ಬಗಲಿ, ಮುಸ್ಕಾನ್ ಕೊಲ್ಹಾರ, ಮುರ್ತುಜಭೀ ಭಾಂಗಿ ಎಂಬ ಮಹಿಳೆಯರೆ ಗಾಯಗೊಂಡವರು.

ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಜಿಟಿ ಜಿಟಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸುತ್ತಿದ್ದು, ಗ್ರಾಮದಲ್ಲಿದ್ದ ಏಕೈಕ ಸಾರ್ವಜನಿಕ ಶೌಚಾಲಯವು ಕುಸಿದು ಈಗ ಸಮಸ್ಯೆ ತಂದೊಡ್ಡಿದೆ.

ತಾಲೂಕಿನ ಜುಮನಾಳ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕೆ ತೆರಳಿದ ಸಂದರ್ಭ ಮೇಲ್ಛಾವಣಿ ಕುಸಿದು ಬಿದ್ದ ಸಂದರ್ಭದಲ್ಲಿ ಶೌಚಾಲಯದಲ್ಲಿ‌ ಮೂವರು ಮಹಿಳೆಯರು ಸಿಲುಕಿಕೊಂಡಿದ್ದರು.

ಅದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಅವರನ್ನು‌ ನೆರವಿಗೆ ದಾವಿಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಡಿದ್ದಾರೆ. ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...