KSRTC: ಶಾಶ್ವತವಾಗಿ ಕಾಲು ಕಳೆದುಕೊಂಡ ನೌಕರನಿಗೆ ₹25 ಲಕ್ಷ, ಇಬ್ಬರ ಕುಟುಂಬಕ್ಕೆ ₹2 ಕೋಟಿ, 31 ಕುಟುಂಬಕ್ಕೆ 3.10ಕೋಟಿ ಚೇಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ಮೊತ್ತದ ಚೆಕ್ಕನ್ನು ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.
ಶನಿವಾರ (ಏ.26ರಂದು) KSRTC ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಚೆಕ್ ವಿತರಣೆ ಕಾರ್ಯಮದಲ್ಲಿ ನಿಗಮದ ವಿವಿಧ ಪರಿಹಾರ ಯೋಜನೆಯಡಿ ಸಿಬ್ಬಂದಿ ಹಾಗೂ ಸಿಬ್ಬಂದಿ ಅವಲಂಬಿತರಿಗೆ ಪರಿಹಾರದ ಚೆಕ್ ವಿತರಿಸಿದ ಬಳಿಕ ಅವರು ಮಾತನಾಡಿದರು.
ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗ ಅರಕಲಗೂಡು ಘಟಕದ ಚಾಲಕ-ಕಂ- ನಿರ್ವಾಹಕ ಬಿ.ಡಿ.ಸುನಿಲ್ ಕುಮಾರ್ ಅವರಿಗೆ ₹25 ಲಕ್ಷ ಪರಿಹಾರ ವಿತರಿಸಿದ್ದೇವೆ. ಅಲ್ಲದೆ ಅವರಿಗೆ 2024ರ ಮಾರ್ಚ್ 25ರಿಂದ ಡಿಸೆಂಬರ್ 9ರವರೆಗೆ 8 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಈ ಹಿಂದೆ ಅಪಘಾತದಲ್ಲಿ ಮೃತಪಟ್ಟ 24 ಮಂದಿ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹1 ಕೋಟಿ ಚೆಕ್ ನೀಡಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ₹26 ಕೋಟಿ ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು.
ಇದರ ಜತೆಗೆ ಇಂದು ವಿವಿಧ ಕಾರಣಗಳಿಂದ ಮೃತಪಟ್ಟ 31 ಮಂದಿ ನೌಕರರ ಅವಲಂಬಿತ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿಯಂತೆ 3.10 ಕೋಟಿ ರೂಪಾಯಿಯ ಚೆಕ್ಕನ್ನು ವಿತರಿಸಲಾಗಿದ್ದು, ಈ ಹಣವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಿಕೊಂಡು ಸಮಾಜದಲ್ಲಿ ಒಳ್ಳೆ ಸ್ಥಾನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಾರಿಗೆ ಸಿಬ್ಬಂದಿಗಳು ಹಗಲು, ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ ಎಂದು ವಿವರಿಸಿದರು.
ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೌಕರರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ‘ಕೆಎಸ್‌ಆರ್‌ಟಿಸಿ ಆರೋಗ್ಯ’ ಯೋಜನೆಯನ್ನೂ ಕೂಡ ಜಾರಿಗೆ ತಂದಿದ್ದು, ರಾಜ್ಯಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದೆ. ಈವರೆಗೂ 56,000ಕ್ಕೂ ಅಧಿಕ ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿಸಿದರು.
KSRTC ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಎಂಡಿ ವಿ.ಅನ್ಬುಕುಮಾರ್, BMTC ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್, ನಿರ್ದೇಶಕಿ ಡಾ. ನಂದಿನಿದೇವಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...