CrimeNEWSದೇಶ-ವಿದೇಶ

ಮಣಿಪುರ ಹಿಂಸಾಚಾರ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನೇ ಸಜೀವದಹಿಸಿದ ಪಾಪಿಗಳು

ವಿಜಯಪಥ ಸಮಗ್ರ ಸುದ್ದಿ

ಮಣಿಪುರ: ರಾಜ್ಯದಲ್ಲಿ ಎದ್ದಿರುವ ಜನಾಂಗೀಯ ನಿಂದನೆ ಮತ್ತು ಹಿಂಸಾಚಾರಗಳು ದೇಶದ ಜನರನ್ನೇ ಬೆಚ್ಚಿಬೀಳಿಸಿದ್ದು ಆತಂಕದಲ್ಲೇ ಜನ ಜೀವನ ಸಾಗಿಸುವಂತಾಗಿ. ಈ ನಡುವೆ ಇದೀಗ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನು ಕಿಡಿಗೇಡಿಗಳ ಗುಂಪೊಂದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯವು ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಆದರೆ ಗಲಭೆಯ ಬಳಿಕ ಒಂದಲ್ಲಾ ಒಂದು ಕೆಟ್ಟ ಘಟನೆಗಳು ಮುನ್ನಲೆಗೆ ಬರುತ್ತಲೇ ಇವೆ.

ಅದರ ಮುಂದುವರಿದ ಭಾಗವೆಂಬಂತೆ ಕಾಕ್ಟಿಂಗ್​​ ಜಿಲ್ಲೆಯ ಎರೋ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನೇ ಸಜೀವ ದಹನ ಮಾಡಿದೆ. ಕಿಡಿಗೇಡಿಗಳ ಗುಂಪೊಂದು ಚುರಚಂದ್​ ಸಿಂಗ್ ಎಂಬ ಸ್ವಾತಂತ್ರ್ಯ ಹೋರಾಟಗಾನ 80 ವರ್ಷ ವಯಸ್ಸಿನ ಹೆಂಡತಿ ಇಬೆತೊಂಬಿಯನ್ನು ಮನೆಯೊಳಗೆ ಬೀಗ ಹಾಕಿ ಬೆಂಕಿ ಹಚ್ಚಿದ್ದಾರೆ.

ಇದು ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಸೆರೊ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನಗಾಗಿ ಹಿಂತಿರುಗಿ ಬನ್ನಿ ಎಂದ ಅಜ್ಜಿ: ಇಬೆತೊಂಬಿ ಕಣ್ಣೆದುರೆ ಸಾವಿಗೀಡಾದ ದೃಶ್ಯವನ್ನು ಕಂಡ 22 ವರ್ಷದ ಮೊಮ್ಮಗ ಪ್ರೇಮಕಾಂತ ಖಾಸಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಘಟನೆ ಬಗ್ಗೆ ವಿವರಿಸಿದ್ದಾನೆ. ಉದ್ರಿಕ್ತರ ಗುಂಪು ದಾಳಿ ಮಾಡಿದಾಗ ನನ್ನ ಅಜ್ಜಿ ನಮ್ಮನ್ನು ಅಲ್ಲಿಂದ ಓಡಿ ಹೋಗಿ ಬಳಿಕ ನನಗಾಗಿ ಹಿಂತಿರುಗಿ ಎಂದು ಹೇಳಿದ್ದನ್ನು ನೆನಪಿಸಿಕೊಂಡಿದ್ದಾನೆ.

ಸಜೀವ ದಹನವಾದ ಇಬೆತೊಂಬಿ: ಆದರೆ ಬಂದು ನೋಡಿದಾಗ ಅಜ್ಜಿ ಇದ್ದ ರೂಮಿಗೆ ಬೀಗ ಹಾಕಿ ಬಳಿಕ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆ ಅಜ್ಜಿ ಅರೆಬೆಂದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಈ ಘಟನೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ.

ಇನ್ನು ಸ್ವಾತಂತ್ರ್ಯ ಹೋರಾಟಗಾರ ಚುರಚಂದ್​ ಸಿಂಗ್ ಅವರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅವರಿಂದ ಗೌರವ ಪಡೆದುಕೊಂಡಿದ್ದರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...