NEWSನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೆ: ಬೈಕ್, ಆಟೋ ಸೇರಿ ಕೆಲ ವಾಹನಗಳಿಗೆ ತಡೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.

ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೈಕ್, ಆಟೋ, ಟ್ರ್ಯಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಿದ್ದು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ. ಇನ್ನು ಜುಲೈ 24ವರೆಗೆ ಅತಿವೇಗದ ಚಾಲನೆ ಮಾಡಿದ 2 ಸಾವಿರಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಚಿಸಿದ ಸುರಕ್ಷತಾ ಸಮಿತಿಯು ಹೆದ್ದಾರಿ ಸುರಕ್ಷತೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. ಮಾರ್ಚ್‌ನಲ್ಲಿ ಸಂಚಾರಕ್ಕೆ ಮುಕ್ತಗೊಂಡಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇವರೆಗೂ 570ಕ್ಕೂ ಹೆಚ್ಚು ಅಪಘಾತಗಳು ಆಗಿರುವ ಬಗ್ಗೆ ವರದಿಯಾಗಿವೆ. ಆ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಜನ ಅಸುನೀಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನಗಳಲ್ಲಿ ನಿಧಾನಗತಿಯಲ್ಲಿ ಚಲಿಸುವ ಮತ್ತು ಸಣ್ಣ ವಾಹನಗಳನ್ನು ನಿಷೇಧಿಸುವ ಮೂಲಕ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ