NEWSನಮ್ಮರಾಜ್ಯಬೆಂಗಳೂರು

ಬೆಂಗಳೂರು- ಮೈಸೂರು ಹೆದ್ದಾರಿ ಅಪೂರ್ಣ ಕಾಮಗಾರಿಯಿಂದ ಅಪಘಾತ, ಸಾವು – ನೋವು: ಎಡಿಜಿಪಿ ಅಲೋಕ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದಿರುವುದೆ ವಾಹನಗಳ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ನಿನ್ನೆ (ಜು.26) ಮಾತನಾಡಿದ ಅವರು, ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಈ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
ಹೆದ್ದಾರಿಯಲ್ಲಿ 20 ರಿಂದ 25 ಅಪಘಾತ ವಲಯಗಳು ಇವೆ. ಎಲ್ಲ ಕಡೆಗೆ ನಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ ಎಂದರು.

ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಹಲವಾರು ಕಾಮಗಾರಿಗಳು ಬಾಕಿ ಉಳಿದಿವೆ. ಪ್ರಮುಖವಾಗಿ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಆ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅವುಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ ಬಾಕಿ ಇದೆ. ಈಗಾಗಲೇ ಹೆದ್ದಾರಿ ಉದ್ಘಾಟನೆ ಆಗಿದೆ. ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ತಂದು ಕೆಲಸ ಮಾಡಿಸುವುದು ಎನ್‍ಎಚ್‍ಎಐ ಅಧಿಕಾರಿಗಳ ಕೆಲಸ ಎಂದರು.

ಇನ್ನು ಸರ್ಕಾರದ ನಿಯಮಗಳ ಪ್ರಕಾರ ಪ್ರಸ್ತಾವನೆ, ಟೆಂಡರ್ ಮಾಡಿ ಕೆಲಸ ಮಾಡಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರನ್ನು ಕೇಳಿ ಕಾಮಗಾರಿ ಮಾಡಿಲ್ಲ. ಸಮಸ್ಯೆ ಆದಾಗ ಸರಿ ಮಾಡಿ ಅಂತ ನಮ್ಮನ್ನು ಕರೆಯುತ್ತಾರೆ ಎಂದು ಹೇಳಿದರು.

ಬೆಂಗಳೂರಿನಿಂದ ಮೈಸೂರುವರೆಗಿನ 118.6 ಕಿಮೀ ವ್ಯಾಪ್ತಿಯಲ್ಲಿ 20ರಿಂದ 25 ಅಪಘಾತ ಸ್ಥಳಗಳನ್ನು ಗಮನಿಸಿದ್ದೇನೆ. NHAI ಪ್ರಾಯೋಗಿಕ ಆಧಾರದ ಮೇಲೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತು ಹಚ್ಚುವ ಕ್ಯಾಮೆರಾವನ್ನು ಸ್ಥಾಪಿಸಿದೆ ಅದು ಸಾಕಾಗುವುದಿಲ್ಲ. ಅಪಘಾತಗಳನ್ನು ತಡೆಗಟ್ಟಲು ಅವರು ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.

ಶೀಘ್ರವೇ ವರದಿ ಸಲ್ಲಿಕೆ: ಇತ್ತೀಚೆಗೆ ಮೂರು ದಿನಗಳ ಕಾಲ ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ತಜ್ಞರ ತಂಡವು ಸಮಸ್ಯೆಗಳ ಬಗ್ಗೆ ವೀಕ್ಷಣೆ ಮಾಡಿದ್ದು, ಶೀಘ್ರವೇ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಎನ್ಎಚ್ಎಐ ಕಾಮಗಾರಿ ಕೈಗೆತ್ತಿಕೊಳ್ಳಲಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ನಾವು ಹೆದ್ದಾರಿಯಲ್ಲಿ ಕನಿಷ್ಠ ಅವಶ್ಯಕತೆಗಳನ್ನು ಪೂರೈಸಲು NHAI ಅಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದೇವೆ. ಒಂದು ವೇಳೆ ಅವರು ಅವಶ್ಯಕತೆ ಈಡೇರಿಸಲು ವಿಫಲವಾದರೆ ಅಥವಾ ದೊಡ್ಡ ಅಪಘಾತ ಸಂಭವಿಸಿದಲ್ಲಿ ನಿರ್ಲಕ್ಷ್ಯದ ಅಡಿಯಲ್ಲಿ ಅವರನ್ನು ಬಂಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟನೆಗೂ ಮುನ್ನವೇ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು, ಆದರೆ ಈಗ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶವಿರುವುದರಿಂದ ಎನ್‌ಎಚ್‌ಎಐ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ