Friday, November 1, 2024
CrimeNEWSನಮ್ಮರಾಜ್ಯ

ನಾಲೆಗೆ ಕಾರುಬಿದ್ದು ನಾಲ್ವರು ಮಹಿಳೆಯರ ಸಾವು: ಮೃತರ ಕುಟುಂಕ್ಕೆ ತಲಾ 2 ಲಕ್ಷ ರೂ. ಪರಿಹಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಶನಿವಾರ ರಾತ್ರಿ  ಮೃತಪಟ್ಟಿದ್ದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆ ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅಪಘಾತದಲ್ಲಿ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಗೊರವನಹಳ್ಳಿ ಗ್ರಾಮದ ಬಸವರಾಜು ಎಂಬುವರ ಪತ್ನಿ ರೇಖಾ ಮತ್ತು ಪುತ್ರಿ ಸಂಜನಾ, ಮಲ್ಲೇಶ್ ಎಂಬುವರ ಪತ್ನಿ ಮಮತಾ ಹಾಗೂ ಗಾಮನಹಳ್ಳಿ ಗ್ರಾಮದ ಮಹದೇವಮ್ಮ (55) ಮೃತರು.

ಶನಿವಾರ ರಾತ್ರಿ ದುರಂತ ಸಂಭವಿಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಕಾರು ಚಾಲಕ ಮನೋಜ್‌ಗೆ ಸಣ್ಣಪುಟ್ಟಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಆದಿಚುಂಚನಗಿರಿಯಲ್ಲಿ ಹರಕೆಸೇವೆ ಇದ್ದಿದ್ದರಿಂದ ಆದಿಚುಂಚನಗಿರಿಗೆ ತೆರಳಲು ಸ್ವಗ್ರಾಮ ಗೊರವನಹಳ್ಳಿಯಿಂದ ಕಾರಿನಲ್ಲಿ ಮನೋಜ್, ರೇಖಾ, ಸಂಜನಾ, ಮಮತಾ ಹೊರಟಿದ್ದು, ಗಾಮನಹಳ್ಳಿಗೆ ಬಂದು ಮಹದೇವಮ್ಮ ಅವರನ್ನು ಹತ್ತಿಸಿಕೊಂಡು ಬಳಿಕ ದೊಡ್ಡಮುಲುಗೂಡಿನಲ್ಲಿರುವ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ನಾಲಾ ಏರಿ ಮೇಲೆ ಕಾರು ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ಉಪನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ನಾಲೆಯೊಳಗೆ ತಲೆಕೆಳಗಾಗಿ ಕಾರು ಬಿದ್ದಿದ್ದರಿಂದ ನಾಲ್ವರು ಮಹಿಳೆಯರು ಹೊರಬರಲಾಗದೇ ಸ್ಥಳದಲ್ಲೇ ಅಸುನೀಗಿದ್ದಾರೆ.

ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಚೆಲುವರಾಯಸ್ವಾಮಿ ಮತ್ತು ಎಚ್.ಸಿ. ಮಹದೇವಪ್ಪ ಕುಟುಂಬದವರಿಗೆ ಸಾಂತ್ವನ ಹೇಳಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿರುವ ಮಾಹಿತಿ ನೀಡಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...