NEWSನಮ್ಮರಾಜ್ಯಬೆಂಗಳೂರುರಾಜಕೀಯ

ಅರಗ ಜ್ಞಾನೇಂದ್ರ ಹೇಳಿಕೆಗೆ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಮಾಜಿ ಸಚಿವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತೀವ್ರಖಂಡನೆ ವ್ಯಕ್ತಪಡಿಸಿದ್ದಾರೆ.

ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ, ತೊಡೆದು ಹಾಕುವ, ಸರ್ವರಿಗೂ ಸಮಪಾಲು – ಸಮ ಬಾಳನ್ನು ನೀಡುವ ಕಾಲಘಟ್ಟದಲ್ಲಿ ಇರುವಾಗ, ಮನಸ್ಮೃತಿಯ ಹರಿಕಾರರಂತೆ ಅರಗ ಜ್ಞಾನೇಂದ್ರ ಹೇಳಿಕೆ ಇವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನಕ್ಕೆ, ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಸರ್ಕಾರವು ಇವರ ಮೇಲೆ ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡಲ್ಲಿ ಮುಂದಿನ ದಿನಮಾನಗಳಲ್ಲಿ ಯಾರೂ ದಲಿತ ವರ್ಗಗಳನ್ನು ತುಚ್ಚವಾಗಿ ನೋಡುವುದು, ಮಾತನಾಡುವುದು ತಪ್ಪುತ್ತದೆ. ಸರ್ಕಾರ ಈ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಬೇಕೆಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು