ನ್ಯೂಡೆಲ್ಲಿ: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇದರಿಂದ ಅವರು ತಮ್ಮ ಸಂಸತ್ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೊದಿ ಉಪನಾಮದ ಕುರಿತು ವ್ಯಂಗ್ಯವಾಡಿ ಸಂಸತ್ ಸ್ಥಾನದಿಂದ ಅನರ್ಹಗೊಳಿಸಿ ಜೈಲು ಶಿಕ್ಷೆಯನ್ನು ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ವಿಧಿಸಿತ್ತು. ಆ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡದೆ. ಇದನ್ನು ಸ್ವಾಗತಿಸಿರುವ ಕಾಂಗ್ರೆಸ್ ಪಕ್ಷದ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.
ಪಿತೂರಿ ಬಯಲಾಗಿದೆ: ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನಮಗೆ ನ್ಯಾಯ ಸಿಕ್ಕಿದ್ದು, ಪ್ರಜಾಪ್ರಭುತ್ವ ಗೆದ್ದಿದೆ. ಸಂವಿಧಾನವನ್ನು ಎತ್ತಿ ಹಿಡಿಯಲಾಗಿದೆ ಎಂದು ಈ ಕುರಿತು ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ಪ್ರಕರಣದಲ್ಲಿ ಬಿಜೆಪಿಯ ಸಂಪೂರ್ಣ ಪಿತೂರಿ ಬಯಲಾಗಿದೆ. ವಿಪಕ್ಷದ ನಾಯಕರನ್ನು ದುರುದ್ದೇಶಪೂರ್ವಕವಾಗಿ ಗುರಿ ಮಾಡುತ್ತಿರುವ ಬಿಜೆಪಿಗೆ ಇದು ನಿಲ್ಲಿಸಲು ಸೂಕ್ತ ಸಮಯವಾಗಿದೆ. ಕಳೆದ 10 ವರ್ಷಗಳಲ್ಲಿ ವೈಫಲ್ಯ ಕಂಡಿರುವ ಇವರು ಇನ್ನಾದರು ಜನಾದೇಶವನ್ನು ಗೌರವಿಸಿ ಆಡಳಿತ ನಡೆಸುವುದು ಉತ್ತಮ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವಕ್ಕೆ ಸಂದ ಜಯ: ಸತ್ಯಕ್ಕೆ ಯಾವಾಗಲೂ ಜಯ ನಿಶ್ಚಿತ. ಏನೇ ಅಡ್ಡ ಬಂದರು ನನ್ನ ಕರ್ತವ್ಯ ಹಾಗೆಯೇ ಉಳಿದಿದೆ. ಭಾರತದ ಕಲ್ಷಪನೆಯನ್ನು ರಕ್ಷಿಸಿ. ಪ್ರಕರಣದ ವಿಚಾರವಾಗಿ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇರಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವಾಗಿದ್ದು, ಸತ್ಯಮೇವ ಜಯತೆ- ಜೈ ಹಿಂದ್ ಎಂದು ಎಐಸಿಸಿ ಟ್ವೀಟ್ ಮಾಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ. ದೇಶದ ಪ್ರಜಾಪ್ರಭುತ್ವ ಉಳಿಸುವ, ನ್ಯಾಯ ಒದಗಿಸುವ ಪೀಠ ಸುಪ್ರೀಂ ಕೋರ್ಟ್. ದೇಶಕ್ಕೋಸ್ಕರ, ಜನತೆಗೋಸ್ಕರ ಮಾಡಿರುವ ದನಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಹೊರಬಂದಿದೆ. ಜನ ಈಗಾಗಲೇ ಅರಿತುಕೊಂಡಿದ್ದಾರೆ. ಎಲ್ಲರೂ ಭಾರತದತ್ತ ಎದುರು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದು ಜನರಿಗೆ ತಿಳಿದಿದೆ ಎಂದು ಹೇಳಿದರು.
यह नफरत के खिलाफ मोहब्बत की जीत है।
सत्यमेव जयते – जय हिंद 🇮🇳 pic.twitter.com/wSTVU8Bymn
— Congress (@INCIndia) August 4, 2023