
ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ನಾಳೆಯಿಂದ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ದಕ್ಷಿಣ ವಲಯ ವಿದ್ಯುತ್ ವಿಭಾಗ ಕಾರ್ಯಪಾಲಕ ಅಭಿಯಂತರ ಉಮೇಶ್ ತಿಳಿಸಿದ್ದಾರೆ.
ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದ ಎರಡು ಪರ್ನೆಸ್‌ಗಳ ಕಾಯಿಲ್‌ಗಳು ಹಾಗೂ ಬ್ರಿಕ್ಸ್‌ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕೆಲಸವಿರುವುದರಿಂದ ಏ.29 ರಿಂದ ಮೇ 8 ವರೆಗೂ ಅಂದರೆ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಬೇರೆ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿ ಕೊಳ್ಳಬಹುದಾಗಿದೆ ಎಂದು ಉಮೇಶ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಉಮೇಶ್, ಕಾರ್ಯಪಾಲಕ ಅಭಿಯಂತರರು, ವಿದ್ಯುತ್ ವಿಭಾಗ, ದಕ್ಷಿಣ ವಲಯ ಮೊ.ಸಂ: 9480688539 ಸಂಪರ್ಕಿಸಬಹುದಾಗಿದೆ.
