Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

BMTC ಅಧಿಕಾರಿಗಳ ಕಿರುಕುಳ: ಡಿಎಂ ಕೊಠಡಿ ಎದುರೆ ನೇಣುಬಿಗಿದುಕೊಂಡು ಚಾಲಕ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಆತ್ಮಹತ್ಯೆ ಪ್ರಕರಣಗಳು ಮರುಕಳಿಸುತ್ತಿವೆ. ಬಿಎಂಟಿಸಿ ದೇವನಹಳ್ಳಿ ಘಟಕ 50ರ ಚಾಲಕ ಕಂ. ನಿರ್ವಾಹಕರೊಬ್ಬರು ಇಂದು ಮುಂಜಾನೆ ಘಟಕದ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ದೇವನಹಳ್ಳಿ ಘಟಕ 50ರ  ಚಾಲಕ ಕಂ ನಿರ್ವಾಹಕ ಆವತಿ ಮೂಲದ ನಾಗೇಶ್ (45) ಎಂಬುವರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಕೆಲ ದಿನಗಳಿಂದ ಅಧಿಕಾರಿಗಳು ಕೊಡುತ್ತಿದ್ದ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್. ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೇಜರ್ ಕೊಠಡಿ ಎದುರೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 6 ಗಂಟೆಗೆ ಸಿಬ್ಬಂದಿಗಳು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಘಟಕದಲ್ಲಿ ಡಿಪೋ ಮ್ಯಾನೇಜರ್ ಹಾಗೂ ಅಧಿಕಾರಿಗಳು ತೀವ್ರ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನೌಕರರ ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ, ಲಂಚಬಾಕತನವೇ ಕಾರಣ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆ ಸಂಬಂಧ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆಯಲ್ಲಿ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿy ಬಿಎಂಟಿಸಿ ಘಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕಾರಿ ವರ್ಗದವರು ಚಾಲನಾ ಸಿಬ್ಬಂದಿಗೆ ನೀಡುತ್ತಿರುವ ಕಿರುಕುಳ ಎಂಥದ್ದು ಎಂಬುದನ್ನು ತೋರಿಸುವಂತಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...