Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಂಗಳೂರು ಏರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನ ಮಾಣಿಕ್​ಷಾ ಪರೇಡ್​ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತ್ರಿವಣ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದರು.

ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು.

ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ.

ಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆ. 2023ರ ಸೆಪ್ಟೆಂಬರ್‍ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ.

ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುವ ಸುಮಾರು 70 ರಿಂದ 80 ಲಕ್ಷ ಅಸಂಘಟಿತ ಅದರಲ್ಲೂ ವಿಶೇಷವಾಗಿ ಸಾರಿಗೆ ವಲಯದ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ.

38. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993 ಜಾರಿ ಹಾಗೂ ಸಂವಿಧಾನದ 73ನೇ ವಿಧಿಯ ತಿದ್ದುಪಡಿ ಮಾಡಿದ 30ನೇ ವರ್ಷದಲ್ಲಿ ನಾವಿದ್ದೇವೆ. ಪ್ರಜಾಪ್ರಭುತ್ವದ ವಿಕೇಂದ್ರೀಕರಣದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿದೆ. ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ಸ್ಥಳೀಯಾಡಳಿತ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.

ರಾಜ್ಯದ ಜನತೆಗೆ ಜೀವನೋಪಾಯವನ್ನು ಕಲ್ಪಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಕಾರ್ಯತಂತ್ರಗಳನ್ನು ನಮ್ಮ ಸರ್ಕಾರವು ಅಳವಡಿಸಿಕೊಳ್ಳಲಿದೆ. ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯ ತರಬೇತಿ, ಸಾಲ ಸೌಲಭ್ಯದ ಲಭ್ಯತೆ ಮತ್ತು ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಉದ್ಯಮಶೀಲತೆಗೆ ಪ್ರೋತ್ಸಾಹ ನೀಡಲಾಗುವುದು. ಹೊಸ ಉದ್ಯಮ ಸ್ಥಾಪನೆಯ ಪ್ರಕ್ರಿಯೆಗಳನ್ನು ಸರಳಗೊಳಿಸುವುದರೊಂದಿಗೆ ಪ್ರತಿ ತಾಲೂಕಿನಲ್ಲಿ ಇದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಜನೆ ಮಾಡಲು ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಕೃಷಿ ಸಂಸ್ಕರಣೆ ಉದ್ಯಮಗಳ ಸ್ಥಾಪನೆಗೆ ಬೆಂಬಲ ನೀಡಲಾಗುವುದು. ಇದರಿಂದ ರೈತರ ಆದಾಯ ಹೆಚ್ಚುವುದಲ್ಲದೆ ಗ್ರಾಮೀಣ ಪ್ರದೇಶದ ಬೆಳವಣಿಗೆಗೆ ನೆರವಾಗಲಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ