NEWS

ಕಬಿನಿ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರೈತರಿಗೆ ದ್ರೋಹ: ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬಿನಿ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರೈತರಿಗೆ ಸರ್ಕಾರ ದ್ರೋಹ ಬಗೆದಿದೆ ಎಂದು ಆರೋಪಿಸಿ ಖಾಲಿ ಬಿಂದಿಗೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು.

ತಮಿಳುನಾಡಿಗೆ ನದಿ ಮೂಲಕ ಹರಿಸುತ್ತಿರುವ ನೀರು ನಿಲ್ಲಿಸಿ ರಾಜ್ಯದ ರೈತರನ್ನು ಉಳಿಸಿ ಕಾವೇರಿ ಭಾಗದ ರೈತರ ಮರಣ ಶಾಸನ ತಪ್ಪಿಸಿ. ರಾಜ್ಯ ಸರ್ಕಾರ ರೈತರಿಗೆ ದ್ರೋಹವೆಸಗಿದ್ದು, ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ. ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚರಿಕೆ ನೀಡಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ ಸಂಘಟನೆಗಳು, ಅಮ್ಮಾ ಅದ್ಮೀ ಪಕ್ಷ ಇಂದು ಕುವೆಂಪು ಉದ್ಯಾನವನದಲ್ಲಿ ಸಭೆ ಸೇರಿ ಚರ್ಚಿಸಿ ಪ್ರತಿಭಟನೆ ಮೆರವಣಿಗೆ ಮೂಲಕ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ಡೆಪ್ಯೂಟಿ ಚೀಫ್ ಇಂಜಿನಿಯರ್ ರಂಗನಾಥ್ ಅವರನ್ನು ಪ್ರತಿಭಟನೆ ಸ್ಥಳಕ್ಕೆ ಕರೆತಂದರು.

ಈ ವೇಳೆ ಮಾತನಾಡಿದ ರಂಗನಾಥ್, ಈಗಾಗಲೇ ಕಬಿನಿ ಕಾವೇರಿಯಿಂದ ನೀರು ಬಿಡುವುದನ್ನು ಕಡಿಮೆ ಮಾಡಿದ್ದೇವೆ ಇವತ್ತಿನ ನಿಮ್ಮ ಹೋರಾಟದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನೀರು ನಮ್ಮದು ಬೇಕೇ ಬೇಕು, ನ್ಯಾಯ ಬೇಕು, ರೈತ ದ್ರೋಹಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಹೂರಟ ರೈತರು ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಚೇರಿಗೆ ನುಗಲು ಯತ್ನಿಸಿದಾಗ ಪೊಲೀಸರು ತಡೆದರು.

ಈ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ನಾವೇನು ಮುಖ್ಯ ಇಂಜಿನಿಯರ್ ಕಚೇರಿ ದರೋಡೆ ಮಾಡಲು ಬಂದಿಲ್ಲ ಇದು ರಾಜ್ಯದ ರೈತರ ಹಿತ ಶಕ್ತಿ ಕಾಪಾಡುವ ಕಚೇರಿಯಾಗಿದ್ದರೆ ಕೂಡಲೇ ನದಿಗೆ ಹರಿಸುವ ನೀರು ನಿಲ್ಲಿಸಿ ಇಲ್ಲವೇ ಕಚೇರಿ ಬಾಗಿಲು ಮುಚ್ಚಿ ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹೋರಾಟ ನಡೆಸುತ್ತಿದ್ದರು ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಂತೆ ಕಾಣುತ್ತಿದೆ. ನೀರು ಖಾಲಿಮಾಡಿ ಸಭೆ ನಡೆಸುವ ನಾಟಕವಾಡುತ್ತಿದೆ. ಮಂತ್ರಿಗಳು ರೈತರಿಗೆ ಕಟ್ಟು ನೀರು ಹರಿಸುತ್ತೇವೆ ಎಂದು ಪಾಠ ಹೇಳುತ್ತಾರೆ. ಆದರೆ ತಮಿಳುನಾಡಿಗೆ ನಿರಯಾಸವಾಗಿ ನೀರು ಬಿಡುತ್ತಿದ್ದಾರೆ ಇದು ರಾಜ್ಯದ ರೈತರಿಗೆ ಬಗೆದ ದ್ರೋಹ ಎದು ಕಿಡಿಕಾರಿದರು.

ಆಮ್ ಆದ್ಮೀ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾದ ರೈತ ಮುಖಂಡರನ್ನು ಹೊರಗಿಟ್ಟು ರೈತರಿಗೆ ಅನ್ಯಾಯ ಮಾಡುವವರೇ ಸರ್ವ ಪಕ್ಷದ ಸಭೆ ನಡೆಸುವುದು ಎಷ್ಟು ಸಮಂಜಸ? ಎಲ್ಲ ಪಕ್ಷಗಳು ನೀರಿನ ವಿಚಾರದಲ್ಲಿ ರೈತರಿಗೆ ವಂಚನೆ ಮಾಡುತ್ತಲೆ ಬಂದಿದ್ದಾರೆ ಅಂತಹವರೇ ಇಂದು ಸಭೆ ನಡೆಸುತ್ತಿದ್ದಾರೆ ಇವರಿಂದ ರಾಜ್ಯದ ರೈತರಿಗೆ ನ್ಯಾಯ ಸಿಗಲು ಸಾಧ್ಯವೇ ಎಂದು ಗುಡುಗಿದರು.

ರಾಷ್ಟ್ರೀಯ ಜಲನೀತಿಗಾಗಿ ಬಹಳ ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ, ರಾಜ್ಯದ ನೆಲ ಜಲ ವಿಷಯ ಬಂದಾಗ ಒಂದಾಗಿ ಹೋರಾಡುವುದು ರಾಜ್ಯದ ಹಿತರಕ್ಷಣೆಗೆ ಅನುಕೂಲವಾಗುತ್ತದೆ. ಈ ದಿಕ್ಕಿನಲ್ಲಿ ಸರ್ಕಾರ ಯೋಚನೆ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಚನ್ನರಾಯಪಟ್ಟಣದ ರೈತ ಮುಖಂಡ ಮೀಸೆ ಮಂಜಣ್ಣ, ಅತ್ತಹಳ್ಳಿ ದೇವರಾಜ್, ಪಿ.ಸೋಮಶೇಖರ್, ಬರಡನಪುರ ನಾಗರಾಜು, ಹಳ್ಳಿಕರೆಹುಂಡಿ ಬಾಗ್ಯರಾಜ್, ಕಿರಗಸೂರ ಶಂಕರ, ಕಮಲಮ್ಮ ಸಿದ್ದೇಶ, ವೆಂಕಟೇಶ, ರವಿ, ಕನ್ನಡ ಸಂಘಟನೆಗಳ ಮಂಜುನಾಥ್, ಅಮ್ಮ್ ಅದ್ಮೀ ಪಕ್ಷದ ಮೋಹನ್ ದಾಸರಿ, ಕುಶಾಲಸ್ವಾಮಿ, ನಂಜಪ್ಪ ಕಾಳೇಗೌಡ, ಮಾಳವಿಕಾ, ರಂಗಯ್ಯ, ರಾಜಶ್ರೀ, ಸಿದ್ದರಾಜು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು