CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಕುಡಿದು ಬಸ್ ಚಲಾಯಿಸಿದ್ದಕ್ಕೆ ಚಾಲಕ, ನಿರ್ವಾಹಕ ಇಬ್ಬರು ಅಮಾನತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಚ್.ಡಿ.ಕೋಟೆಯಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಚಾಲಕ ಮದ್ಯಪಾನ ಮಾಡಿ ಬಸ್‌ ಓಡಿಸಿದ್ದರಿಂದ ಅಮಾನತು ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಗೋಪಾಲ ಕೃಷ್ಣ ಮತ್ತು ನಿರ್ವಾಹಕ ಪ್ರಕಾಶ್​ ಅಮಾನತುಗೊಂಡವರು.

ಬಸ್ ಓಡಿಸುವ ವೇಳೆ ಮದ್ಯಪಾನ ಮಾಡಿದ್ದರಿಂದ ಬಸ್‌ ಚಲಾಯಿಸಲು ಸಾಧ್ಯವಾಗದೆ ದಾರಿ ಮಧ್ಯೆಯೇ ಚಾಲಕ ಗೋಪಾಲ ಕೃಷ್ಣ ಬಸ್ ನಿಲ್ಲಿಸಿದ್ದ. ಚಾಲಕನ ನಡವಳಿಕೆಯಿಂದ ಎಚ್ಚೆತ್ತಿದ್ದ ಪ್ರಯಾಣಿಕರು ಬಸ್ ನಿಲ್ಲಿಸುತ್ತಿದಂತೆ ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಈ ವೇಳೆ ನಾನು ಮುಂಜಾನೆ ಕುಡಿದಿದ್ದು ಈಗ ಅಲ್ಲ. ನಾನು ಕೆಲಸಕ್ಕೆ ಬರಲ್ಲ ಎಂದರು ಬಿಡಲಿಲ್ಲ ಎಂದು ಸಾರ್ವಜನಿಕರ ಬಳಿ ಹೇಳಿದ್ದನು. ಪ್ರಯಾಣಿಕರ ಪ್ರಶ್ನೆಗೆ ಉತ್ತರಿಸಲು ಪರದಾಡಿದ್ದ ಚಾಲಕ ಗೋಪಾಲ ಕೃಷ್ಣ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಆಧಾರದ ಮೇರೆಗೆ ಚಾಲಕ ಮತ್ತು ನಿರ್ವಾಹಕ ಇಬ್ಬರನ್ನು ಮೈಸೂರು ವಿಭಾಘಿಯ ನಿಯಂತ್ರಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು