CrimeNEWSನಮ್ಮಜಿಲ್ಲೆಬೆಂಗಳೂರು

ಡೈರಿ ಸರ್ಕಲ್: ಸಿಲಿಂಡರ್ ಸ್ಫೋಟ- ಓರ್ವ ಮೃತ, ಮತ್ತಿಬ್ಬರಿಗೆ ಗಂಭೀರಗಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಮರ್ಷಿಯಲ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಿಲಿಂಡರ್‌ ಪಕ್ಕದಲ್ಲೇ ಮಲಗಿದ್ದ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಡೈರಿ ಸರ್ಕಲ್ ಸಮೀಪದ ಮಹಾಲಿಂಗೇಶ್ ಬಡಾವಣೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗುರುವಾರ ಆ.24ರ ಬೆಳಗ್ಗೆ 9 ಗಂಟೆ ಸುಮಾರಿಗೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡಿದ್ದು, ರವಿ (45) ಎಂಬಾತ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮಹಾಲಿಂಗೇಶ್ ಬಡಾವಣೆಯ ಕಟ್ಟದ ಮೊದಲ ಮಹಡಿಯಲ್ಲಿರುವ ಪೋಲಮ್ಮಸ್ ಮೆಸ್ ಹೋಟೆಲ್‌ನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ.

ಗುರುವಾರ ಬೆಳಗ್ಗೆ ಎಂದಿನಂತೆ ಅಡುಗೆ ಭಟ್ಟರು ಟಿಫನ್‌ಗೆ ತಯಾರಿ ಮಾಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಮೊದಲ ಮಹಡಿಯಲ್ಲಿ ಅಡುಗೆ ಮಾಡುತ್ತಿದ್ದ ನಾಗರಾಜ್ ಹಾಗೂ ರೋಮಯ್ಯ ಚೋರ್ಲಾ ಗಂಭೀರ ಗಾಯಗೊಂಡಿದ್ದಾರೆ. ಮೂಲತಃ ಇವರು ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ.

ಇತ್ತ ಸಿಲಿಂಡರ್ ಜಾಗದಲ್ಲಿ ಮಲಗಿದ್ದ ರವಿ ಮೃತಪಟ್ಟಿದ್ದಾರೆ. ಮೆಸ್‌ ನಡೆಸುತ್ತಿದ್ದ ಕಾರಣಕ್ಕೆ ಕಟ್ಟಡದ ಕೆಳ ಮಹಡಿಯಲ್ಲಿ ಸಿಲಿಂಡರ್‌ಗಳನ್ನು ಇಡಲಾಗಿತ್ತು. ಒಳ ಭಾಗದಲ್ಲಿ ಒಟ್ಟು 10 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಇಡಲಾಗಿತ್ತು. ಸ್ಫೋಟಗೊಂಡ ಸಿಲಿಂಡರ್ ಪಕ್ಕದಲ್ಲೆ 10 ಸಿಲಿಂಡರ್‌ಗಳು ಇದ್ದವು. ಒಂದು ವೇಳೆ ಆ ಸಿಲಿಂಡರ್‌ಗಳು ಸ್ಫೋಟಗೊಂಡಿದರೆ ದೊಡ್ಡ ಅನಾಹುತವೇ ಆಗುತ್ತಿತ್ತು. ಅದೃಷ್ಟವಶಾತ್ ಉಳಿದ ಸಿಲಿಂಡರ್‌ಗಳಿಗೆ ಯಾವುದೇ ಹಾನಿಯಾಗಿಲ್ಲ.

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ: ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ. ರವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಲಿಂಡರ್‌ ಸ್ಫೋಟ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತ ಜನರು ಕಟ್ಟಡದ ಮುಂದೆ ಜಮಾಯಿಸಿದ್ದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು