ಮೈಸೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಮೈಸೂರು ಕೃಷಿ ಅಧಿಕಾರಿಗಳಿಬ್ಬರನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ.
ಮಂಡ್ಯದ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಸಚಿವರ ವಿರುದ್ಧ ಮೈಸೂರು ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರದ ಬರೆಯುವ ಮೂಲಕ ದೂರು ನೀಡಿದ್ದರು. ಆ ದೂರಿನ ಮೇರೆಗೆ ಮೈಸೂರಿನ ಕೃಷಿ ಎಡಿ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಇದೀಗ ಕಾನೂನು ಪ್ರಕಾರವೇ ಬಂಧಿತ ಅಧಿಕಾರಿಗಳ ಅಮಾನತು ಮಾಡಲು ಕೃಷಿ ಆಯುಕ್ತರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಇಂದು ಅಥವಾ ನಾಳೆ ಬಂಧಿತ ಕೃಷಿ ಅಧಿಕಾರಿಗಳನ್ನು ಅಮಾನತು ಮಾಡುವ ಸಾಧ್ಯತೆ ಇದೆ.
ಸದ್ಯ ಇಬ್ಬರು ಅಧಿಕಾರಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಕುರಿತು ಮೈಸೂರು ಜಂಟಿ ಕೃಷಿ ನಿರ್ದೇಶಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾತ್ರವಲ್ಲ, ಬಂಧನದ ಬಗ್ಗೆ ಮೇಲಧಿಕಾರಿಗಳಿಗೆ ಮೈಸೂರು ಜಂಟಿ ಕೃಷಿ ನಿರ್ದೇಶಕ ಪತ್ರ ಬರೆದಿದ್ದಾರೆ. ಕೃಷಿ ಇಲಾಖೆಯ ಆಯುಕ್ತರಿಗೆ ಪ್ರಕರಣ ಸಂಬಂಧ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.