NEWSನಮ್ಮರಾಜ್ಯ

ಜೀವಹಾನಿ ತಪ್ಪಿಸಲು ಎಲ್ಲರೂ ಮುಂದಾಗೋಣ

ನಾನು ಕೊರೊನಾ ಎಚ್ಚೆತ್ತುಕೊಳ್ಳದಿದ್ದರೆ ನಿನಗೆ ಬರೋನೇ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿರುವ ಮನವಿಗೆ ಭಾರತೀಯರಾದ ನಾವು ಸ್ಪಂದಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಮುಂದಾಗಬೇಕು. ಇಲ್ಲವೆಂದರೆ ಮುಂದಿನ ಅನಾಹುತಕ್ಕೆ ನಾವೆ ಹೊಣೆಯಾಗಬೇಕಾಗುತ್ತಿದೆ. ಆದ್ದರಿಂದ ಏಪ್ರಿಲ್‌ 14ರ ವರೆಗೂ ಮನೆಯಲ್ಲಿ ಇದ್ದು ದೇಶದಲ್ಲಿ ಹರಡುತ್ತಿರುವ ವಿಶ್ವಮಹಾಮಾರಿ ಕೊರೊನಾವನ್ನು ನಿಯಂತ್ರಿಸಬೇಕು.

ವಿಶ್ವದಲ್ಲಿ ಸುಮಾರು 4 ಲಕ್ಷ ಜನರು ವೈರಸ್‌ ಸೋಂಕಿಗೆ ಒಳಗಾಗಿದ್ದು 7 ಸಾವಿರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನಾದರೂ ನಾವು ಎಚ್ಚರಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಜೀವದಂಡವನ್ನೇ ತೆರಬೇಕಾಗುತ್ತದೆ. ಆದ್ದರಿಂದ ನಮ್ಮ ಆರೋಗ್ಯದ ಜತೆಗೆ ಅಕ್ಕಪಕ್ಕದವರ ಆರೋಗ್ಯವನ್ನು ಉಳಿಸಲು ಮುಂದಾಗೋಣ. ಇದಕ್ಕೆ ಎಲ್ಲರೂ ಸಹಕರಿಸಿ.

ಯಾದಗಿರಿಯಲ್ಲಿ ಮಟನ್ಮಾರಾಟಗಾರನಿಗೆ ಲಾಠಿರುಚಿ

ಮಾಂಸ ಮಾರಾಟ ಮಾಡುವ ವೇಳೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಮಾರಾಟಗಾರನಿಗೆ ಪೊಲೀಸರು ಲಾಠಿರುಚಿ ತೋರಿಸಿದ್ದಾರೆ.

ಯಾದಗಿರಿ ನಗರದ ಶಿವನಗರ ಬಡಾವಣೆಯಲ್ಲಿ ಯುಗಾದಿ ಹಬ್ಬದ ಹೊಸ್‌ತಡಕು ಅಂಗವಾಗಿ ಗುರುವಾರ ಮಾಂಸ ತೆಗೆದುಕೊಳ್ಳಲ್ಲು ಗ್ರಾಹಕರು ಅಂಗಡಿ ಬಳಿ ಹೋಗುತ್ತಿದ್ದಾಗ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಅಂತಹ ಯಾವುದೇ ರೀತಿಯ ಜಾಗ್ರತೆ ವಹಿಸದ ಕಾರಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿ ಮಾಲೀಕನಿಗೆ ಲಾಠಿಯಿಂದ ಬಿಸಿ ಮುಟ್ಟಿಸಿದ್ದಾರೆ.

ವಿಜಯಪುರದಲ್ಲಿ 7 ಕಾರ್ಮಿಕರು ಪೊಲೀಸರ ವಶಕ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಕೂಲಿ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏಳು ಮಂದಿ ಕಟ್ಟಡ ಕಾರ್ಮಿಕರು ಕೆಲಸಕ್ಕಾಗಿ ತಮಿಳುನಾಡಿನಿಂದ ಬಂದಿದ್ದು, ಅವರಿಗೆ ಊಟದ ವ್ಯವಸ್ಥೆ ಇಲ್ಲದೆ ಪರಿತಪ್ಪಿಸುವಚ ಸ್ಥಿತಿ ಎದುರಾಗಿತ್ತು. ಅದನ್ನು ತಿಳಿದ ಪೊಲೀಸರು ಆ ಕಾರ್ಮಿಕರನ್ನು ವಶಕ್ಕೆ ಪಡೆದು ಊಟದ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್‌ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಾಗಲೇ ಜಾಗೃತಿ ಮೂಡಿಸುತ್ತಿವೆ. ಆದರೂ ಜನ ಇನ್ನು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಮುಂದಾಗದೆ ಅಸಡ್ಡೆಯಿಂದ ರೋಗವನ್ನು ಬರುಮಾಡಿಕೊಳ್ಳಿತ್ತಿದ್ದಾರೆ. ಇದು ಆತಂಕಕಾರಿ ವಿಷಯವಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ