NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಮೊಬೈಲ್‌ ನೋಡಿಕೊಂಡು ಬಸ್‌ ಚಾಲನೆ – ₹5 ಸಾವಿರ ದಂಡ ಕಟ್ಟಿದ ಚಾಲಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ (  Using mobile Phone while driving) ಪ್ರಕರಣದಡಿ  5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.

ಸಂಸ್ಥೆಯ ಬಸ್ ಚಾಲಕ ಮೊಬೈಲ್‌ ನೋಡಿಕೊಂಡು ಆ.27ರಂದು ಬಸ್‌ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.

ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.

ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.

ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್‌ ಫೋನ್‌ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...