NEWSನಮ್ಮರಾಜ್ಯಸಿನಿಪಥ

ಕೊನೆಗೂ ಮಾಧ್ಯಮದ ಜತೆಗಿನ ಮುನಿಸು ಬಿಟ್ಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರ್ಷಗಳ ಹಿಂದೆ ಮಾಧ್ಯಮಗಳ ಬಗ್ಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೀರಾ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆ ಬಳಿಕ ದರ್ಶನ್‌ ಮತ್ತು ಮಾಧ್ಯಮಗಳ ನಡುವಿನ ಸಂಘರ್ಷ ಅಲ್ಲಲ್ಲಿ ಸಂದರ್ಭಕ್ಕೆ ತಕ್ಕಂತೆ ಮುಂದುವರಿದಿತ್ತು.

ಮಾಧ್ಯಮಗಳ ಬಗ್ಗೆ ಆಡಿರುವ ಮಾತುಗಳು ಸ್ಯಾಂಡಲ್​ವುಡ್​ನಲ್ಲೂ ಕೂಡ ದೊಡ್ಡ ಸುದ್ದಿಯಾಗಿತ್ತು. ಈಗ ವರಮಹಾಲಕ್ಷ್ಮೀ ಹಬ್ಬದ ದಿನ ಕೊನೆಗೂ ದರ್ಶನ್‌ ಮಾಧ್ಯಮದ ಜತೆಗಿನ ಮುನಿಸನ್ನು ಕೊನೆಗೊಳಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳೊಂದಿಗೆ ನಟ ದರ್ಶನ್‌ ಈ ಕುರಿತು ವಿಸ್ತೃತ ಸಂದೇಶ ಕಳುಹಿಸಿದ್ದಾರೆ.

ದರ್ಶನ್‌ ತಮ್ಮ ಟ್ವೀಟ್‌ನಲ್ಲಿ ʻʻಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕ೦ದಕ ಉಂಟಾಗಿತ್ತು. ಈ ವರಮಹಾಲಕ್ಷ್ಮೀ ಹಬ್ಬದ ಮುನ್ನಾದಿನ, ಮಿತ್ರ ರಾಕ್‌ಲೈನ್‌ ವೆಂಕಟೇಶ್‌ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾ೦ತ್ಯಗೊಂಡಿದೆʼʼ ಎಂದು ತಿಳಿಸಿದ್ದಾರೆ.

ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ: ʻʻಕೆಲವು ವರ್ಷಗಳ ಹಿಂದಿನ ನನ್ನ ಆಡಿಯೊ ಒಂದು ದುರುದ್ದೇಶಪೂರ್ವಕವಾಗಿ ವೈರಲ್‌ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿ೦ದ ಮಾಡಿದರೊ ಗೊತ್ತಿಲ್ಲ. ಆದರೂ ಆ ವ್ಯಕ್ತಿಗೆ ಮುಂದೆ ಒಳ್ಳೆಯದಾಗಲಿ. ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒ೦ದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ ಎಂದಿದ್ದಾರೆ.

ಜತೆಯಾಗಿ ಕೆಲಸ ಮಾಡೋಣ: ʻʻಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿ೦ದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ. – ಪ್ರೀತಿಯಿ೦ದ ದರ್ಶನ್‌ ತೂಗೂದೀಪʼʼ ಎಂದು ಟೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...