ನ್ಯೂಡೆಲ್ಲಿ: ಕೋವಿಡ್-19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ರೂ.1.70 ಲಕ್ಷ ಕೊಟಿ ರೂ. ಬಿಡುಗಡೆ ಮಾಡಿದೆ.
ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರ ಬಡವರು, ರೈತರು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರು ನೆಮ್ಮದಿಯಾಗಿ ಬದುಕಲು ಇದು ಅನುವು ಮಾಡಿಕೊಡುವುದರ ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19 ರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಹೆಚ್ಚು ಗಂಭೀರವಾಗಿ ಮತ್ತು ಚುರುಕಾಗಿ ಅನುಷ್ಠಾನಗೊಳಿಸುವಲ್ಲಿ ಈ ಹಣ ಸಹಕಾರಿಯಾಗುತ್ತದೆ. 1.70 ಲಕ್ಷ ಕೋಟಿ ಆರ್ಥಿಕ ಪರಿಹಾರ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಬಡವರ ಹಸಿವನು ಅರಿತು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಗೋಧಿ ಅಥವಾ ಅಕ್ಕಿ ಮತ್ತು 1 ಕೆ.ಜಿ. ಬೇಳೆಯನ್ನು ಕೊಡಲು ನಿರ್ಧರಿಸಿದ್ದು ಒಂದು ದೊಡ್ಡ ಅಸಾಧಾರಣ ನಿರ್ಧಾರ ಎನ್ನಬಹುದಾಗಿದೆ.
ಮಹಿಳೆಯರ ಜನಧನ್ ಖಾತೆಗೆ ಪ್ರತಿ ತಿಂಗಳು 500 ರೂ. ನಂತೆ 3 ತಿಂಗಳಿಗೆ 1500 ರೂ. ಗಳನ್ನು ಮುಂಗಡವಾಗಿ ಮತ್ತು ನೇರವಾಗಿ ವರ್ಗಾವಣೆ ಮಾಡುವುದಾಗಿ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿನ 2,000 ಹಣವನ್ನು ಮುಂಗಡವಾಗಿ ಕೊಡುವುದು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಯೋಜನೆ 10 ಲಕ್ಷ ರೂಪಾಯಿಯಿಂದ 20 ಲಕ್ಷಕ್ಕೆ ಏರಿಸಿದ್ದು ಇದರಿಂದ 63 ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ಲಾಭವಾಗಲಿದೆ.
8.3 ಕೋಟಿ ಗೃಹಿಣಿಯರಿಗೆ ಉಜ್ವಲ್ ಯೋಜನೆ ಅಡಿ 3 ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದು, ಸಂಘಟಿತ ವಲಯದ ಕಾರ್ಮಿಕರಿಗೆ ಇ.ಪಿ.ಎಫ್. ಮೇಲೆ ಸಾಲ ಸೌಲಭ್ಯ ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಅಡಿ ಕೂಲಿ ದರವನ್ನು 249 ರಿಂದ ರೂ.302 ಏರಿಸಿದ್ದು, ದೇಶದ ಬಡವರು ಇಂತಹ ಸಂದಿಗ್ಧ ಸಮಯದಲ್ಲಿ ಹಸಿವಿನಿಂದ ಬಳಲದಂತೆ ಮಾಡುತ್ತದೆ.” ”ಇದರ ಜೊತೆಗೆ ವಯೋವೃದ್ಧರಿಗೆ, ವಿಧವೆಯರಿಗೆ 1000 ರೂ. ಗೌರವಧನವನ್ನು 3 ತಿಂಗಳವರೆಗೆ ಕೊಡಲು ನಿರ್ಧರಿಸಿರುವುದು ಒಳ್ಳೆಯ ನಿರ್ಧಾರ.
ಇದಲ್ಲದೇ ಕೇಂದ್ರ ಸರ್ಕಾರದಿಂದ ಉದ್ಯಮ ವಲಯಕ್ಕೆ ಹಲವಾರು ಹಣಕಾಸು ಸಹಾಯಕ ಯೋಜನೆಗಳನ್ನು ಕೊಡಮಾಡಿ ಕೋವಿಡ್-19 ಮಹಾಮಾರಿಯ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವಲ್ಲಿ ಸಹಕಾರಿಯಾಗುತ್ತಿದೆ.
ಈ ಬಗ್ಗೆ ಮಾತನಾಡಿವರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಡವರಿಗೆ ಇಷ್ಟೊಂದು ದೊಡ್ಡಮಟ್ಟದ ಹಣಕಾಸು ಸಹಾಯ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರಧಾರವನ್ನು ಸ್ವಾಗತಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.