NEWSನಮ್ಮಜಿಲ್ಲೆನಮ್ಮರಾಜ್ಯ

ಮತ್ತೆ ನಾಲ್ಕು ಪ್ರಶಸ್ತಿಗಳ ಗರಿಯನ್ನು ಮುಡಿಗೇರಿಸಿಕೊಂಡ ಕೆಎಸ್‌ಆರ್‌ಟಿಸಿ: ಸಿಬ್ಬಂದಿಗಳು, ಜನರಿಗೆ ಅರ್ಪಿಸಿದ ಸಂಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗ ನಿಗಮ (KSRTC)ದ ಮುಡಿಗೆ ಮತ್ತೆ 4 ಪ್ರಶಸ್ತಿಗಳ ಗರಿ ಮೂಡಿದೆ. ವೀ ಕನೆಕ್ಟ್ ಇಂಡಿಯಾ ಮೀಡಿಯಾ ಆಂಡ್ ರಿಸರ್ಚ್ ಸ್ಥಾಪಿಸಿರುವ ಪ್ರಶಸ್ತಿ ಕೆಎಸ್‌ಆರ್‌ಟಿಸಿಗೆ 4 ವರ್ಗದಲ್ಲಿ ಲಭಿಸಿದೆ.

ಬ್ಯ್ರಾಡಿಂಗ್ ಮತ್ತು ಮಾರ್ಕೆಟಿಂಗ್, ಸಾರಿಗೆ ಸುರಕ್ಷತೆ, ಕಾರ್ಮಿಕ ಸ್ನೇಹಿ ಉಪಕ್ರಮಗಳು ಹಾಗೂ ಮಾಹಿತಿ ತಂತ್ರಜ್ಞಾನ ವರ್ಗಗಳಲ್ಲಿ ನಿಗಮವು ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಬರುವ ಸೆಪ್ಟೆಂಬರ್ 29 ರಂದು ದೆಹಲಿಯ ವಿಮಾನ ನಿಲ್ದಾಣದಲ್ಲಿನ ರಾಡಿಸನ್ ಬ್ಲೂ ಪ್ಲಾಜಾದಲ್ಲಿ ನಡೆಯಲಿದೆ.

ಸೆ.29ರಂದು ನಡೆಯು ಸಮಾರಂಭದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹಾಗೂ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅತಾವಳೆ ಇರಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು, ಈ ಪ್ರಶಸ್ತಿಗಳನ್ನು ನಿಗಮದ ಸಮಸ್ತ ಸಿಬ್ಬಂದಿಗೆ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಸಮರ್ಪಿಸಿದೆ.

ಹೌದು! ತನ್ನ ಉತ್ತಮ ಸೇವೆಯಿಂದ ಗುರುತಿಸಿಕೊಂಡಿರುವ KSRTCಗೆ ಮತ್ತೆ ನಾಲ್ಕು ಪ್ರಶಸ್ತಿಗಳು ಲಭಿಸಿದ್ದು, ಈ ನಾಲ್ಕು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ಕೆಎಸ್‌ಆರ್‌ಟಿಸಿ ದೇಶದ ಗಮನ ಸೆಳೆದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜೊತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೂಡ ಕಾರ್ಯನಿರ್ವಹಿಸುತ್ತಿದ್ದು, ಜತೆಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಕೂಡ ಕೆಎಸ್‌ಆರ್‌ಟಿಸಿ ಜೊತೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ಈ ನಾಲ್ಕು ನಿಗಮಗಳ ಸೇವೆ ಗುರುತಿಸಿ ಕೆಎಸ್‌ಆರ್‌ಟಿಸಿಗೆ ಏಷ್ಯಾದ ಅತ್ಯುತ್ತಮ ಗುಣಮಟ್ಟ ಪ್ರಶಸ್ತಿಯನ್ನು ನೀಡಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಕೆಎಸ್‌ಆರ್‌ಟಿಸಿಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್‌ ಪ್ರಶಸ್ತಿ ಬಂದಿತ್ತು. ಕೆಎಸ್‌ಆರ್‌ಟಿಸಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಈ ಪ್ರಶಸ್ತಿ ಲಭಿಸಿತ್ತು. 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಭಾಜನವಾಗಿತ್ತು. ಆಗಸ್ಟ್‌ 17ರಂದು ಈ ಪ್ರಶಸ್ತಿಯನ್ನು ಸಿಂಗಾಪುರ್‌ನಲ್ಲಿ ಕೆಎಸ್‌ಆರ್‌ಟಿಸಿ ಸ್ವೀಕರಿಸಿತ್ತು.

ಇನ್ನು, ಕೆಎಸ್‌ಆರ್‌ಟಿಸಿಗೆ ಗ್ರೀನ್‌ ಟೆಕ್‌ ಫೌಂಡೇಷನ್‌ ಕೊಡಮಾಡುವ ಗ್ರೀನ್‌ ಟೆಕ್‌ ಎಚ್‌ಆರ್‌ ಪ್ರಶಸ್ತಿಯೂ ಲಭಿಸಿತ್ತು. ಮಾನವ ಸಂಪನ್ಮೂಲ ವರ್ಗದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ಪರಿವರ್ತಿತ ಕಾರ್ಯಸಾಧನೆಗೆ ಈ ಪ್ರಶಸ್ತಿ ಬಂದಿತ್ತು. ಆಗಸ್ಟ್‌ 21ರಂದು ಈ ಪ್ರಶಸ್ತಿಯನ್ನು ಕೂಡ ದೆಹಲಿಯಲ್ಲಿ ಕೆಎಸ್‌ಆರ್‌ಟಿಸಿ ಸ್ವೀಕರಿಸಿತ್ತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...