NEWSನಮ್ಮರಾಜ್ಯರಾಜಕೀಯ

ಪರಿಷತ್ ನೂತನ ಸದಸ್ಯರಾಗಿ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಪ್ರಮಾಣವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನೂತನ ಸದಸ್ಯರಾಗಿ ಉಮಾಶ್ರೀ, ಎಂ.ಆರ್. ಸೀತಾರಾಮ್ ಮತ್ತು ಎಚ್.ಪಿ. ಸುಧಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಗುರುವಾರ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ. ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರು, ನೂತನ ಶಾಸಕರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ.

ಮೇಲ್ಮನೆಯ ಮೂವರು ನಾಮನಿರ್ದೇಶಿತ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಪಿ.ಆರ್. ರಮೇಶ್ ಮತ್ತು ಸಿ.ಎಂ. ಲಿಂಗಪ್ಪ ಅವರಿಂದ ತೆರವಾದ ಸ್ಥಾನಗಳಿಗೆ ಈ ಮೂವರು ನಾಮ ನಿರ್ದೇಶನಗೊಂಡಿದ್ದಾರೆ.

ಉಮಾಶ್ರೀ ಅವರು ಬಾಗಲಕೋಟೆ ಜಿಲ್ಲೆಯ ತೇರದಾಳದಿಂದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಬಯಸಿದ್ದರು, ಆದರೆ ಟಿಕೆಟ್ ಕೈ ತಪ್ಪಿತ್ತು, ಸೀತಾರಾಮ್ ಅವರ ಪುತ್ರ ಎಂ.ಎಸ್. ರಕ್ಷಾ ರಾಮಯ್ಯ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು