Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ಅಪಘಾತ ಪ್ರಕರಣ: ಪರಿಹಾರ ನೀಡದ KSRTC ಬಸ್‌ ಜಪ್ತಿ ಮಾಡಿದ ವಿರಾಜಪೇಟೆ ನ್ಯಾಯಾಲಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿರಾಜಪೇಟೆ : 2010ರಲ್ಲಿ ಕಾರು ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಬಂಧಿಸಿದ ಅಪಘಾತ ಪ್ರಕರಣವೊಂದರಲ್ಲಿ ಪರಿಹಾರ ನೀಡದೆ ಮಾರ್ಗ ಬದಲಿಸಿ ಓಡಿಸುತ್ತಿದ್ದ ಬಸ್‌ಅನ್ನು ಪತ್ತೆ ಹಚ್ಚಿದ ಕೋರ್ಟ್‌ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊಡಗು ಜಿಲ್ಲೆಯ ವಿರಾಜಪೇಟೆ ನ್ಯಾಯಾಲಯ KSRTC Bus seize ಮಾಡಿರುವುದು. 2010ರಲ್ಲಿ ಹುಣಸೂರಿನಲ್ಲಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ನಡೆದಿತ್ತು. ಹೀಗಾಗಿ ಫಾತೀಮಾ ಅಪ್ಸರ್‌ ಎಂಬುವರು ಕೆಎಸ್‌ಆರ್‌ಟಿಸಿ ವಿರುದ್ಧ ಅಪಘಾತ ವಿಮೆ ಪರಿಹಾರಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಪರಿಹಾರ ನೀಡಲು ಕೆಎಸ್‌ಆರ್‌ಟಿಸಿಗೆ 2020ರಲ್ಲಿ ಆದೇಶ ಹೊರಡಿಸಿತ್ತು.

ಇತ್ತ ಜಿಲ್ಲಾ ನ್ಯಾಯಲಯದ ತೀರ್ಪನ್ನು ಪ್ರಶ್ನಿಸಿ ಕೆಎಸ್‌ಆರ್‌ಟಿಸಿ ನಿಗಮವು ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಜಿಲ್ಲಾ ನ್ಯಾಯಾಲಯದ ತೀರ್ಪನ್ನೇ ರಾಜ್ಯ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಅಪಘಾತ ವಿಮೆ ನೀಡಲೇಬೇಕಾದ ಅನಿವಾರ್ಯತೆಯಲ್ಲಿದ್ದ ಕೆಎಸ್‌ಆರ್‌ಟಿಸಿ ನಿಗಮವು, ಪರಿಹಾರ ನೀಡದೆ ಎಷ್ಟೇ ಸಮಯಾವಕಾಶ ನೀಡಿದರೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿತ್ತು.

ಅಲ್ಲದೆ ನಿಗಮವು ಆ ಬಸ್‌ ಮಾರ್ಗವನ್ನೇ ಬದಲಿಸಿತ್ತು. ಆದರೆ ಕೊಳ್ಳೇಗಾಲದಿಂದ ವಿರಾಜಪೇಟೆ ಪಟ್ಟಣಕ್ಕೆ ಬಂದಿದ್ದ ಬಸ್‌ಅನ್ನು ವಿರಾಜಪೇಟೆ ಕೋರ್ಟ್ ಸಿಬ್ಬಂದಿ ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಈ ವಿಷಯವನ್ನು ಚಾಲಕ ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನು ನ್ಯಾಯಾಲಯವು ಅಪಘಾತದ ಪರಿಹಾರ ಹಣ ಕೊಟ್ಟು ವಾಹನ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ