CrimeNEWSನಮ್ಮಜಿಲ್ಲೆಬೆಂಗಳೂರು

ಬೆಂಗಳೂರಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ – ನಿಷ್ಕ್ರಿಯ ಪೊಲೀಸ್ ಇಲಾಖೆ : ಅನಿಲ್ ನಾಚಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯುವಕನೊಬ್ಬ ಕಚೇರಿಗೆ ಪ್ರವೇಶಿಸಿ  ಮಹಿಳಾ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರಿನ ಖ್ಯಾತಿಗೆ ಮಸಿ ಬಳೆಯುವಂತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಹೇಳಿದರು.

ಈ ಪ್ರಕರಣವನ್ನು ಬೆಳಕಿಗೆ ತಂದ ಅನಿಲ್ ನಾಚಪ್ಪ ವಿಡಿಯೋ ಮತ್ತು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ನಗರದ ಚರ್ಚ್ ಸ್ಟ್ರೀಟ್ ಒಂದರ ಕಚೇರಿಗೆ ಏಕಾಏಕಿ ಪ್ರವೇಶಿಸಿದ ಕಾಮಂದನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ ಎಂದರು.

ಘಟನೆ ನಡೆದ ತಕ್ಷಣವೇ ಹತ್ತಿರದ ಕಬ್ಬನ್ ಪಾರ್ಕ್ ಪೊಲೀಸರಿಗೆ ಕರೆ ಮಾಡಿದರೂ ಜತೆಗೆ ದೂರನ್ನು ನೀಡಿದರು ಸಹ ಪೊಲೀಸರು ತಕ್ಷಣದಲ್ಲಿ ಸಹಕರಿಸದೆ ಕೈ ಚೆಲ್ಲಿ ಕುಳಿತರು. ಸೂಕ್ತ ಸಮಯದಲ್ಲಿ ಸ್ಥಳಕ್ಕೆ ಆಗಮಿಸದೆ ನಂತರ ಒತ್ತಡ ಬಂದಾಗ ನಾಮ್‌ ಕೇ ವಾಸ್ತೆಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ಕಾರ್ಯವನ್ನು ಕೈಗೊಂಡರು.

ಹತ್ತಿರದ ರಸ್ತೆಯಲ್ಲಿ ಇದ್ದ ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲವೆಂದು, ಆರೋಪಿಯನ್ನು ಹಿಡಿಯಲು ಸಾಕಷ್ಟು ಕಷ್ಟವಾಗುತ್ತದೆ ಎಂದು ತಿಳಿಸಿದ ವಿಚಾರ ಬೆಂಗಳೂರು ಪೊಲೀಸರು ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಾಕಷ್ಟು ಬೇಜವಾಬ್ದಾರಿಯನ್ನು ಹೊಂದಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದು ತಿಳಿಸಿದರು.

ಅಲ್ಲದೆ ಬೆಂಗಳೂರಿನ ಅನೇಕ ಪ್ರಮುಖ ರಸ್ತೆಗಳಲ್ಲಿ ಸುರಕ್ಷತೆಗಾಗಿ ಹಾಕಿರುವ ಸಿಸಿ ಕ್ಯಾಮೆರಾಗಳು ಸಂಪೂರ್ಣ ನಿಷ್ಕ್ರಿಯವಾಗಿರುವ ವಿಚಾರ ಪೊಲೀಸರಿಂದಲೇ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಯಾವುದೇ ದೂರು ನೀಡಿದರು ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂಬ ಉತ್ತರ ಸಿಗುತ್ತದೆ. ಇದು ನಿಜಕ್ಕೂ ಬೆಂಗಳೂರಿನ ಘನತೆಗೆ ಗೌರವ ತರುವಂತದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡಿ ನಗರ ಸುರಕ್ಷತೆಗೆ ಹಾಕಿರುವ ಸಿಸಿ ಕ್ಯಾಮೆರಾಗಳು ಭ್ರಷ್ಟಾಚಾರ ರೂಪದಲ್ಲಿ ಏಜೆನ್ಸಿಗಳು ಹಾಗೂ ಸ್ಥಳೀಯ ರಾಜಕಾರಣಿಗಳ ಪಾಲಾಗುತ್ತಿದೆ. ಬೆಂಗಳೂರಿನ ಜನತೆಗೆ ಈ ಕ್ಯಾಮೆರಾಗಳಿಂದ ಯಾವುದೇ ಸುರಕ್ಷತೆ, ರಕ್ಷಣೆ ಲಭ್ಯವಿಲ್ಲದಂತಾಗಿದೆ. ಕೂಡಲೇ ಗೃಹ ಸಚಿವರು ತನಿಖೆಯನ್ನು ನಡೆಸಿ ಸಿಸಿ ಕ್ಯಾಮೆರಾಗಳ ಕಾರ್ಯ ಶೈಲಿಯನ್ನು ಪರಿಶೀಲಿಸಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು