NEWSನಮ್ಮಜಿಲ್ಲೆಬೆಂಗಳೂರು

ಸೆ.11ರಂದು ಖಾಸಗಿ ಸಾರಿಗೆ ವಾಹನಗಳ ಮಾಲೀಕರಿಂದ ಬೆಂಗಳೂರು ಬಂದ್‌: ರಸ್ತೆಗಿಳಿಯಲ್ಲ 5 ಲಕ್ಷ ವಾಹನಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್‍ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಹೀಗಾಗಿ ಸೆ.11 ರಂದು ಬೆಂಗಳೂರು ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಿಸಲಿವೆ.

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಓಡಾಡುತ್ತಿದ್ದ ಖಾಸಗಿ ಬಸ್‌ಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ. ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಡ ಕೂಡ ತರಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ.

ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಒಕ್ಕೂಟ ನಿರ್ಧಾರ ಮಾಡಿದೆ. ಬಂದ್‍ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಿದೆ.

ಏನಿರಲಿದೆ, ಏನಿರಲ್ಲ?: 32 ಸಂಘಟನೆಗಳ ವಾಹನಗಳು ಸಂಚಾರ ನಿಲ್ಲಿಸಲಿವೆ. ಏರ್‌ಪೋರ್ಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಓಲಾ, ಊಬರ್ ಆಟೋ ಟ್ಯಾಕ್ಸಿ ಬಂದ್ ಆಗಲಿದೆ. ಕಾರ್ಪೋರೇಟ್ ಕಂಪನಿಗಳ ಜತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಬಂದ್‍ಗೆ ಬೆಂಬಲ ನೀಡಿದ್ದು ಸಂಚಾರ ಸ್ಥಗಿತಗೊಳಿಸಲಿವೆ.

ಖಾಸಗಿ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುವವರಿಗೂ ಬಂದ್ ಬಿಸಿ ತಟ್ಟಲಿದೆ. ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ ಇದೆ. ನಗರದಲ್ಲಿ 3 ಲಕ್ಷ ಆಟೋ, 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೋರೇಟ್ ಕಂಪನಿಯ ಬಸ್‍ಗಳು ಸೇವೆಯಿಂದ ಹೊರಗುಳಿಯಲಿವೆ.

ಒಟ್ಟು 5 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರವನ್ನು ನಿಲ್ಲಿಸಲಿವೆ. ಅಲ್ಲದೇ ಹೋಟೆಲ್ ಮಾಲೀಕರ ಸಂಘದ ಬಳಿಯೂ ಬಂದ್‍ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದ್ದು ಹೋಟೆಲ್‍ಗಳು ಬಂದ್ ಆಗುವ ಸಾಧ್ಯತೆ ಇದೆ. ಇದರೊಂದಿಗೆ ವರ್ತಕರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳೊಂದಿಗೆ ಬಂದ್‍ಗೆ ಬೆಂಬಲಿಸುವಂತೆ ಕೇಳಿಕೊಳ್ಳಲಾಗಿದೆ.

ಪ್ರತಿಭಟನಾಕಾರರು ನಗರದೊಳಗೆ ಬೃಹತ್ ಮೆರವಣಿಗೆಗೆ ತಯಾರಿ ಮಾಡಿಕೊಂಡಿದ್ದು, ಮೆರವಣಿಗೆ ಬಳಿಕ ಫ್ರೀಡಂ ಪಾರ್ಕ್‍ನಲ್ಲಿಶಕ್ತಿ ಪ್ರದರ್ಶನ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿವೆ.

Leave a Reply

error: Content is protected !!
LATEST
ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!?