ಚಿತ್ರದುರ್ಗ: ಇತ್ತೀಚೆಗೆ ಕಲುಷಿತ ನೀರು ಕುಡಿದು ಮೃತಪಟ್ಟಿದ್ದ ಚಿತ್ರದುರ್ಗದ ಕಾವಾಡಿಗರ ಹಟ್ಟಿಗೆ ಭೇಟಿಗೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದು ನೀಡಿದ್ದರು.
ಮನೆಯ ಯಜಮನ ಸದಸ್ಯರನ್ನು ಕಳೆದುಕೊಂಡಿರುವ ನೊಂದ ಕುಟುಂಬಗಳ ಜತೆ ಮಾತುಕತೆ ನಡೆಸಿ ಸಾಂತ್ವನ ಈ ವೇಳೆ ಹೇಳಿದರು. ನೊಂದ ಕುಟುಂಬಗಳು ಹಾಗೂ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಂತದ ನೇರ ಹೊಣೆಗಾರಿಕೆಯನ್ನು ಜಿಲ್ಲಾಡಳಿತ ಹೊರಬೇಕಾಗುತ್ತದೆ. ಪ್ರಕರಣವನ್ನು ಸೂಕ್ತ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಸಾವನ್ನಪ್ಪಿದವರಿಗೆ ಹೆಚ್ಚಿನ ಪರಿಹಾರ ಧನವನ್ನು ವಿತರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಸ್ಥಳೀಯ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.